ಕೊರೊನಾದಿಂದ ಚೇತರಿಸಿಕೊಂಡಿದ್ದ ದುನಿಯಾ ವಿಜಯ್ ತಾಯಿ ವಿಧಿವಶ…!

ಇತ್ತೀಚೆಗಷ್ಟೇ ಕೊರೊನಾದಿಂದ ಚೇತರಿಸಿಕೊಂಡಿದ್ದ ದುನಿಯಾ ವಿಜಯ್ ತಾಯಿ ಇಂದು ವಿಧಿವಶರಾಗಿದ್ದಾರೆ.

ದುನಿಯಾ ವಿಜಯ್ ತಾಯಿ ನಾರಾಯಣಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿ ಕಳೆದ ಒಂದು ತಿಂಗಳಿನಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ನಿತ್ಯ ವೈದ್ಯರು ಮನೆಗೆ ಬಂದು ನಾರಾಯಣಮ್ಮ ಅವರಿಗೆ ಚಿಕಿತ್ಸೆ ನೀಡಿ ಹೋಗುತ್ತಿದ್ದರು. ಚಿಕಿತ್ಸೆ ನೀಡುತ್ತಿದ್ದರೂ ದಿನದಿಂದ ದಿನಕ್ಕೆ ಅವರ ಆರೋಗ್ಯದ ಸ್ಥಿತಿ ಗಂಭೀರವಾಗುತ್ತಾ ಬಂದಿದೆ. ಬ್ರೇನ್ ಸ್ಟ್ರೋಕ್ ಆಗಿ ಅವರು ತುಂಬಾ ದಿನಗಳ ಕಾಲ ಹಾಸಿಗೆ ಹಿಡಿದಿದ್ದರು. ಈ ಬಗ್ಗೆ ದುನಿಯಾ ವಿಜಯ್ ಮಾಹಿತಿ ಕೂಡ ನೀಡಿದ್ದರು.

ಕೆಲ ದಿನಗಳ ಹಿಂದೆ ದುನಿಯಾ ವಿಜಯ್ ತಂದೆ-ತಾಯಿಗೆ ಕೊರೊನಾ ಸೋಂಕು ತಗುಲಿತ್ತು. ಈ ವೇಳೆ ಆಸ್ಪತ್ರೆ, ಬೆಡ್ ಲಭ್ಯವಾಗದ ಕಾರಣ ವಿಜಯ್ ಪೋಷಕರಿಗೆ ಮನೆಯಲ್ಲಿಯೇ ಚಿಕಿತ್ಸೆ ಕೊಡಿಸಲು ಆರಂಭಿಸಿದರು. ಚಿಕಿತ್ಸೆಯಿಂದ ತಂದೆ- ತಾಯಿ ಚೇತರಿಸಿಕೊಂಡರು. ಈ ಬಗ್ಗೆ ದುನಿಯಾ ವಿಜಯ್ ಕೊರೊನಾ ಮೆಟ್ಟಿ ನಿಂತಿದ್ದು ಹೇಗೆ ಎನ್ನುವ ಬಗ್ಗೆ ಮಾಹಿತಿ ನೀಡಿದ್ದರು.

ಆದರೆ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿದ್ದರಿಂದ ಅವರು ಚೇತರಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಭಾವುಕರಾದ ದುನಿಯಾ ವಿಜಯ್ ಮತ್ತೆ ಹುಟ್ಟಿ ಬಾ ಅಮ್ಮ ಎಂದು ಪೋಸ್ಟ್ ಮಾಡಿದ್ದಾರೆ.

ದುನಿಯಾ ವಿಜಯ್ ಅವರ ಕುಟುಂಬ ತಾಯಿ ನಾರಾಯಣಮ್ಮ ಅವರ ಅಂತ್ಯಕ್ರಿಯೆಯನ್ನು ಆನೇಕಲ್​ನ ಕುಂಬಾರ ಹಳ್ಳಿಯಲ್ಲಿ ನಾಳೆ ಮಧ್ಯಾಹ್ನ ಮಾಡಲು ನಿರ್ಧರಿಸಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights