ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ದ ಹೋರಾಟ ನಿರತ ರೈತರ ಪ್ರತಿಭಟನೆ!

ಇಂಧನ ಮತ್ತು ಅಡುಗೆ ಅನಿಲ (LPG) ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ಕೆಎಂ) ಕರೆನೀಡಿದ್ದು, ಇದರ ಭಾಗವಾಗಿ ಪಂಜಾಬ್ ಮತ್ತು ಹರಿಯಾಣದ ರೈತರು ಗುರುವಾರ ಹಲವಾರು ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾಕಾರರು ತಮ್ಮ ಟ್ರಾಕ್ಟರುಗಳು ಮತ್ತು ಇತರ ವಾಹನಗಳನ್ನು ರಸ್ತೆಬದಿಯಲ್ಲಿ ನಿಲ್ಲಿಸಿ, ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆ  ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲದೆ, ಖಾಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪ್ರದರ್ಶಿಸಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರವನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ ಎಂದು ರೈತರು ವಾಗ್ದಾಳಿ ನಡೆಸಿದ್ದಾರೆ. ಪಂಜಾಬ್‌ನ ಮೊಹಾಲಿ, ಅಮೃತಸರ, ಲುಧಿಯಾನ, ಮೊಗಾ, ರುಪ್‌ನಗರ ಮತ್ತು ಹರಿಯಾಣದ ಸೋನಿಪತ್, ಸಿರ್ಸಾ ಮತ್ತು ಗೋಹಾನಾ ಮತ್ತು ಅನೇಕ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದವು. ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರತಿಭಟನಾ ಸ್ಥಳಗಳ ಬಳಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಕೃಷಿ ಕಾಯ್ದೆ ವಿರುದ್ದದ ಪ್ರತಿಭಟನೆಯಲ್ಲಿ 500 ರೈತರ ಸಾವು; ಕುಗ್ಗದ ರೈತರು

ಲುಧಿಯಾನದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಮುಖಂಡ ಹರ್ಮೀತ್ ಸಿಂಗ್ ಕಡಿಯನ್, ಹೆಚ್ಚುತ್ತಿರುವ ಇಂಧನ ಮತ್ತು ಅಡುಗೆ ಅನಿಲದ ಬೆಲೆಗಳು ಸಮಾಜದ ಪ್ರತಿಯೊಂದು ವರ್ಗದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ದ ಕಳೆದ ನವೆಂಬರ್ ತಿಂಗಳಿನಿಂದ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ಇದೇ ವೇಳೆ ಅವರು ಸಮಾಜದಲ್ಲಾಗುತ್ತಿರುವ ವಿವಿಧ ರೀತಿಯ ಪ್ರತಿಕೂಲ ಪರಿಣಾಮಗಳ ವಿರುದ್ದವೂ ಪ್ರತಿಭಟನೆಸುತ್ತಿದ್ದಾರೆ.

ಇದನ್ನೂ ಓದಿ: ಮೋದಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ..? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್…

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights