ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ರಾಜ್ಯಾಧ್ಯಕ್ಷ!

ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ತಮಿಳುನಾಡಿನ ಬಿಜೆಪಿ ಅಧ್ಯಕ್ಷರಾಗಿ ನೇಮಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇಮಕಾತಿ ಪತ್ರವನ್ನು ತಮಿಳುನಾಡು ಬಿಜೆಪಿಗೆ ರವಾನಿಸಿದ್ದಾರೆ.

2024 ರ ಲೋಕಸಭಾ ಚುನಾವಣೆಗೆ ಮುನ್ನ ತಮಿಳುನಾಡಿನಲ್ಲಿ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಅವರನ್ನು ಕೇಂದ್ರ ಸಚಿವಾಲಯದ ರಾಜ್ಯ ಸಚಿವರನ್ನಾಗಿ ನೇಮಿಸಿದೆ. ಅವರನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಮೀನುಗಾರಿಕೆ, ಪಶುಸಂಗೋಪನಾ ಸಚಿವನ್ನಾಗಿ ನೇಮಿಸಲಾಗಿದೆ.

ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮವಿದ್ದು, ಮುರುಗನ್‌ಗೆ ಸಚಿವ ಸ್ಥಾನ ನೀಡಿರುವುದರಿಂದ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ತೆರವುಗೊಳಿಸಲಾಗಿದೆ.

ಎಲ್‌. ಮುರುಗನ್‌ ಅವರ ಸ್ಥಾನಕ್ಕೆ ಹಾಲಿ ಶಾಸಕ ನೈನಾರ್‌ ನಾಗೇಂದ್ರನ್ ಅಥವಾ ಅಣ್ಣಾಮಲೈ ಅವರನ್ನು ನೇಮಿಸುವ ಬಗ್ಗೆ ಈ ಹಿಂದೆ ವರದಿಯಾಗಿತ್ತು. ಇದೀಗ ಕುತೂಹಲಕ್ಕೆ ತೆರೆಬಿದ್ದಿದ್ದು ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಅಣ್ಣಾ ಮಲೈ ಅವರು 2020 ರ ಆಗಸ್ಟ್‌ ತಿಂಗಳಲ್ಲಿ ಬಿಜೆಪಿ ಸೇರಿದ್ದರು. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅವರು ಕರೂರ್‌ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಸೋಲನುಭವಿಸಿದ್ದರು. ಅವರ ವಿರುದ್ದ ಸ್ಪರ್ಧಿಸಿದ್ದ ಡಿಎಂಕೆಯ ಮೊಂಜನೂರು ಎಲಂಗೋ ಅವರು 24,816 ಓಟುಗಳ ಅಂತರದಲ್ಲಿ ಜಯಗಳಿಸಿದ್ದರು.

ಇದನ್ನೂ ಓದಿ: ಬಿಎಸ್‌ವೈಗೆ ಬಿಗ್‌ ರಿಲೀಫ್‌; ಯಡಿಯೂರಪ್ಪ ಸೇರಿ 8 ಮಂದಿ ವಿರುದ್ದದ ಭ್ರಷ್ಟಾಚಾರ ಪ್ರಕರಣ ವಜಾ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights