ಎಸ್‌ಪಿ ಮಹಿಳಾ ಅಭ್ಯರ್ಥಿಯ ಸೀರೆ ಎಳೆದು ಬಿಜೆಪಿ ಕಾರ್ಯಕರ್ತರ ದೌರ್ಜನ್ಯ!?

ಮುಂಬರುವ ಉತ್ತರ ಪ್ರದೇಶ ಬ್ಲಾಕ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮಹಿಳೆಯ ಸೀರೆಯನ್ನು ಬಿಜೆಪಿ ಕಾರ್ಯಕರ್ತರು ಬೀದಿಯಲ್ಲಿ ಎಳೆಯುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ರಿತು ಸಿಂಗ್ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಪಾಸ್‌ಗವಾನ್ ಬ್ಲಾಕ್‌ನಲ್ಲಿ ಚುನಾವಣೆಗೆ ರಿಜ್ ಸಿಂಗ್ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಆಕೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ನಾಮನಿರ್ದೇಶನ ಕಚೇರಿಗೆ ಹೋಗುವಾಗ ರಿತು ಸಿಂಗ್ ಅವರೊಂದಿಗೆ ಬಂದ ಇತರ ಮಹಿಳೆಯರ ಮೇಲೂ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ ಬಟ್ಟೆಗಳನ್ನು ಹರಿದು ಹಾಕಿದ್ದಾರೆ. ಬಿಜೆಪಿ ಬೆಂಬಲಿಗರು ಆಕೆಯ ನಾಮಪತ್ರಗಳನ್ನು ಕಿತ್ತುಕೊಂಡು ಹರಿದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಎಸ್‌ಪಿ ನಾಯಕ ಆರೋಪಿಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಈ ವೈರಲ್ ವಿಡಿಯೋವನ್ನು ಟ್ವೀಟ್ ಮಾಡಿದ್ದು, ಇದರಲ್ಲಿ ಇಬ್ಬರು ಪುರುಷರು ಮಹಿಳೆಯನ್ನು ತಡೆದು ಆಕೆಯ ಸೀರೆಯನ್ನು ಹಿಡಿಯುವುದು ಕಂಡು ಬಂದಿದೆ. ಅಖಿಲೇಶ್ ಯಾದವ್ ಅವರು ಆರೋಪಿಗಳನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧಿಕಾರ ಹಸಿದ ಗೂಂಡಾಗಳು” ಎಂದು ಕರೆದಿದ್ದಾರೆ.

ಸಮಾಜವಾದಿ ಪಕ್ಷದ ಅಭ್ಯರ್ಥಿ ರಿತು ಸಿಂಗ್ ಅವರ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147, 171 ಎಫ್, 354, 392 ಮತ್ತು 427 ರ ಅಡಿಯಲ್ಲಿ ಬಿಜೆಪಿ ಕಾರ್ಯಕರ್ತ ಯಶ್ ವರ್ಮಾ ಮತ್ತು ಇತರ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights