ದೇಶದಲ್ಲಿ 41,506 ಹೊಸ ಕೊರೊನಾ ಕೇಸ್ : 895 ಜನ ಮಹಾಮಾರಿಗೆ ಬಲಿ!

ದೇಶದಲ್ಲಿ ಹೊಸದಾಗಿ 41,506 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 895 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ದೇಶದಲ್ಲಿ ಚೇತರಿಕೆ ಪ್ರಮಾಣ 97.2% ರಷ್ಟಿದೆ. ಸಕ್ರಿಯ ಪ್ರಕರಣಗಳು ಶೇಕಡಾ 1.48 ರಷ್ಟಿದೆ.

ಕಳೆದ 24 ಗಂಟೆಯಲ್ಲಿ ದಾಖಲಾದ 41,506 ಕೊರೊನಾ ಪ್ರಕರಣಗಳಲ್ಲಿ ಎಲ್ಲಾ ರಾಜ್ಯಗಳ ಪೈಕಿ ಕೇರಳದಲ್ಲಿ ಅತಿ ಹೆಚ್ಚು ಕೋವಿಡ್ -19 ಪ್ರಕರಣಗಳು 14,087, ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ 8,296, ಆಂಧ್ರಪ್ರದೇಶ 2,925 ಪ್ರಕರಣಗಳು, ತಮಿಳುನಾಡು 2,913 ಪ್ರಕರಣಗಳು ಮತ್ತು ಅಸ್ಸಾಂನಲ್ಲಿ 2,391 ಪ್ರಕರಣಗಳು ದಾಖಲಾಗಿವೆ.

ಭಾನುವಾರ, 895 ಕೋವಿಡ್ ಸಂಬಂಧಿತ ಸಾವುನೋವುಗಳು ದಾಖಲಾಗಿದ್ದು, ಶನಿವಾರ ವರದಿಯಾದ 1,206 ಸಾವುಗಳಿಗಿಂತ ಕಡಿಮೆಯಾಗಿದೆ. ಮಹಾರಾಷ್ಟ್ರದಲ್ಲಿ (494) ಗರಿಷ್ಠ ಸಾವುನೋವುಗಳು ವರದಿಯಾಗಿದ್ದು, ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 109 ಸಾವುಗಳು ಸಂಭವಿಸಿವೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 41,526 ರೋಗಿಗಳು ಚೇತರಿಸಿಕೊಂಡಿದ್ದಾರೆ. ದೈನಂದಿನ ಚೇತರಿಕೆ ಪ್ರಮಾಣ ಸತತ 59 ನೇ ದಿನವೂ ಹೊಸ ಪ್ರಕರಣಗಳನ್ನು ಮೀರಿಸಿದೆ.

ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತವು ಹಿಂದಿನ ದಿನದಲ್ಲಿ 18,43,500 ಪರೀಕ್ಷೆಗಳನ್ನು ನಡೆಸಿದ್ದು, ಇದುವರೆಗೆ ಒಟ್ಟು 43.09 ಕೋಟಿ ಪರೀಕ್ಷೆಗಳನ್ನು ನಡೆಸಿದೆ.

ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಶನಿವಾರ ಸುಮಾರು 37,23,367 ಕೋವಿಡ್ -19 ಲಸಿಕೆ ನೀಡಲಾಗಿದ್ದು, ಈವರೆಗೆ ಒಟ್ಟು 37,60,32,586 ಲಸಿಕೆ ನೀಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights