SSLC ಪರೀಕ್ಷಾ ಕೇಂದ್ರಕ್ಕೆ ತೆರಳು ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ!

ರಾಜ್ಯದಲ್ಲಿ ಜುಲೈ 19 ರಿಂದ 22 ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು ವಿದ್ಯಾರ್ಥಿಗಳಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಸಾರಿಗೆ ಬಸ್ ಗಳ ವ್ಯವಸ್ಥೆ ಕಲ್ಪಿಸಿದೆ.

ಪರೀಕ್ಷಾ ಕೇಂದ್ರಗಳಿಂದ ಮನೆಗೆ ಅಥವಾ ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಜುಲೈ 19 ರಿಂದ 22 ವರೆಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರದಿಂದ ಮನೆಗೆ ತೆರಳಲು ಉಚಿತ ಸಾರಿಗೆ ವ್ಯವಸ್ಥೆ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್ ಆರ್ ಟಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಪ್ರದೇಶದಲ್ಲಿ ನಿಲುಗಡೆ ನೀಡಲು ಸೂಚಿಸಲಾಗಿದೆ.

ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಕಡ್ಡವಾಗಿ ಹಾಲ್ ಟಿಕೆಟ್ ನ್ನು ತಮ್ಮ ಜೊತೆ ಕೊಂಡೊಯ್ಯಬೇಕು ಎಂದು ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಶಿವಜ್ಯೋತಿ ಕಳಸದ್ ಹೇಳಿದ್ದಾರೆ. ರಾಜ್ಯದಲ್ಲಿ ಜುಲೈ 19 ರಿಂದ 22 ವರೆಗೆ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದೆ.
ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights