ಗೋವಾ ಜನತೆಗೆ ಬಿಗ್ ಆಫರ್ ಕೊಟ್ಟ ಕೇಜ್ರಿವಾಲ್ : ಪಕ್ಷ ಗೆದ್ದರೆ ಪ್ರತಿ ಕುಟುಂಬಕ್ಕೆ ವಿದ್ಯುತ್ ಫ್ರೀ!

ಗೋವಾದ ಪ್ರತೀ ಕುಟುಂಬಗಳಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಿಗ್ ಆಫರ್ ಕೊಟ್ಟಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಮತ ಚಲಾಯಿಸಿದ ಗೋವಾದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯುನಿಟ್ ವಿದ್ಯುತ್ ಉಚಿತ ಸಿಗಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.

40 ಸದಸ್ಯರ ಗೋವಾ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ. “ಪಕ್ಷ ಗೆದ್ದರೆ ಪ್ರತಿ ಕುಟುಂಬವು ತಿಂಗಳಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯುತ್ತದೆ” ಎಂದು ಕೇಜ್ರಿವಾಲ್ ಸುದ್ದಿಗಾರರ ಮುಂದೆ ಹೇಳಿದ್ದಾರೆ.

“ದೆಹಲಿಯ ಜನರು ಉಚಿತ ವಿದ್ಯುತ್ ಪಡೆಯಲು ಸಾಧ್ಯವಾದರೆ, ಗೋವಾದ ಜನರಿಗೆ ಏಕೆ ಉಚಿತ ವಿದ್ಯುತ್ ನೀಡಬಾರದು? ಗೋವಾ ಹೆಚ್ಚುವರಿ ವಿದ್ಯುತ್ ಹೊಂದಿದ ರಾಜ್ಯವಾಗಿದ್ದರೂ, ಕರಾವಳಿ ರಾಜ್ಯದಲ್ಲಿ ಆಗಾಗ್ಗೆ ವಿದ್ಯುತ್ ಕಡಿತ ನಡೆಯುತ್ತಲೇ ಇರುತ್ತದೆ. ಹೀಗಾಗಿ ಇಲ್ಲಿ ವಿದ್ಯುತ್ ಅವಶ್ಯಕತೆ ಇದೆ” ಎಂದಿದ್ದಾರೆ.

ಪ್ರತಿಪಕ್ಷದಲ್ಲಿ ಇರಬೇಕಾದವರು ಈಗ ರಾಜ್ಯವನ್ನು ಆಳುತ್ತಿದ್ದಾರೆ ಮತ್ತು ಅಧಿಕಾರದಲ್ಲಿರಬೇಕಾದವರು ಈಗ ಪ್ರತಿಪಕ್ಷದಲ್ಲಿದ್ದಾರೆ. ಕಳೆದ ಬಾರಿ ಗೋವಾದಲ್ಲಿ ನಡೆದ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಇತರ ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರಿದ ಶಾಸಕರ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ ನಡೆಸಿದರು.

“ಬದಿ ಬದಲಿಸಿದ ಈ ಶಾಸಕರು ಜನರ ಕೆಲಸಗಳನ್ನು ಪೂರೈಸಲು ತಾವು ಬಿಜೆಪಿಗೆ ಸೇರುತ್ತಿದ್ದೇವೆ ಎಂದು ಹೇಳಿಕೊಂಡರು. ಆದರೆ ಅವರು ಹೇಳಿಕೊಂಡಂತೆ  ಜನರ ಕೆಲಸವನ್ನು ಮಾಡಿದ್ದಾರಾ? ಇಲ್ಲ ಅವರು ಹಣದ ಆಮಿಷಕ್ಕೆ ಬೇರೆ ಪಕ್ಷ ಸರಿದಿದ್ದಾರೆ. ಜನರಿಗೆ ದ್ರೋಹ ಮಾಡಿದ್ದಾರೆ” ಎಂದು ಕಿಡಿ ಕಾರಿದರು.

ಜೊತೆಗೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಪರ ಮತ ಚಲಾಯಿಸುವುದಿಲ್ಲ ಎಂದು ಸಾವಿರಾರು ಗೋವಾ ವಾಸಿಗಳು ಹೇಳಿಕೊಳ್ಳುತ್ತಿದ್ದಾರೆ. ಗೋವಾ ಬದಲಾವಣೆಯನ್ನು ಬಯಸುತ್ತಿದೆ, ಜನರು ಶುದ್ಧ ರಾಜಕೀಯವನ್ನು ಬಯಸುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights