ದೇಶದಲ್ಲಿ 38,792 ಹೊಸ ಕೊರೊನಾ ಕೇಸ್ : 624 ಜನ ಬಲಿ…!

ದೇಶದಲ್ಲಿ ಹೊಸದಾಗಿ 38,792 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ 624 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತ ಕಳೆದ 24 ಗಂಟೆಗಳಲ್ಲಿ 38,792 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 624 ಸಾವುಗಳನ್ನು ವರದಿ ಮಾಡಿದೆ. ಈ ಮೂಲಕ ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3.09 ಕೋಟಿಯಾಗಿದ್ದು ಒಟ್ಟು ಸಾವಿನ ಸಂಖ್ಯೆ 4,11,408 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 41,000 ಕೊರೊನಾ ಸೋಂಕಿತರು ಚೇತರಿಸಿಕೊಂಡಿದ್ದು, ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,29,946 ರಷ್ಟಿದೆ.

ಮಂಗಳವಾರದ ಅಂಕಿ ಅಂಶಗಳಿಗೆ ಹೋಲಿಸಿದರೆ ದೇಶದಲ್ಲಿ ಬುಧವಾರ 7,000 ಕ್ಕೂ ಹೆಚ್ಚುವರಿ ಹೊಸ ಪ್ರಕರಣಗಳು ದಾಖಲಾಗಿವೆ. ಮಂಗಳವಾರ ಭಾರತ ಸುಮಾರು ನಾಲ್ಕು ತಿಂಗಳಲ್ಲಿ ಕಡಿಮೆ ಕೊರೊನಾ (31,443) ಪ್ರಕರಣಗಳನ್ನು ದಾಖಲಿಸಿತ್ತು.

ರಾಷ್ಟ್ರೀಯ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಭಾರತದಲ್ಲಿ ಇದುವರೆಗೆ 38.76 ಕೋಟಿಗೂ ಹೆಚ್ಚು ಲಸಿಕೆ ಪ್ರಮಾಣವನ್ನು ನೀಡಲಾಗಿದೆ. ಈ ಪೈಕಿ ಕಳೆದ 24 ಗಂಟೆಗಳಲ್ಲಿ 37.14 ಲಕ್ಷ ಡೋಸ್‌ಗಳನ್ನು ನೀಡಲಾಗಿದೆ.

ಜಗತ್ತಿನಾದ್ಯಂತ ಹರಡುತ್ತಿರುವ ಮೂರನೇ ಅಲೆ: ಕೇಂದ್ರ
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ, ಎನ್ಐಟಿಐ ಆಯೋಗ್ (ಆರೋಗ್ಯ) ಸದಸ್ಯ ಡಾ.ವಿ.ಕೆ ಪಾಲ್ ಅವರು ಕೋವಿಡ್ -19 ಸೋಂಕಿನ ಮೂರನೇ ಅಲೆ ಈಗಾಗಲೇ ವಿಶ್ವದ ಕೆಲವು ಭಾಗಗಳಲ್ಲಿ ಕಂಡುಬರುತ್ತಿದೆ. ಪ್ರತಿದಿನ ಜಗತ್ತಿನಾದ್ಯಂತ 3.9 ಲಕ್ಷ ಹೊಸ ದೃಢೀಪಡಿಸಿದ ಪ್ರಕರಣಗಳು ವರದಿಯಾಗುತ್ತಿವೆ. ಈ ಹಂತದಲ್ಲಿ ಅಸಡ್ಡೆ ತೋರುವುದರಿಂದ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗಬಹುದು ಎಂದು ಡಾ. ವಿ.ಕೆ.ಪಾಲ್  ಹೇಳಿದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights