ರಾಷ್ಟ್ರಪತಿ ಸ್ಥಾನಕ್ಕೆ ಶರದ್‌ ಪವಾರ್?; ಊಹಾಪೋಹಗಳಿಗೆ ತೆರೆ ಎಳೆದ ಪವಾರ್!

ಭಾರತದ ರಾಷ್ಟ್ರಪತಿ ಚುನಾವಣೆಯ ಸುತ್ತಲೂ ಸಾಕಷ್ಟು ಗದ್ದಲಗಳು ನಡೆಯುತ್ತಿವೆ. ಈ ಮಧ್ಯೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಅವರು ರಾಷ್ಟ್ರಪತಿ ಹುದ್ದೆಗಾಗಿ ಬ್ಯಾಟಿಂಗ್ ಮಾಡಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿವೆ. ಶರದ್ ಪವಾರ್ ಅವರನ್ನು ಭಾರತದ ಮುಂದಿನ ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಲು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಲಾಬಿ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಎಲ್ಲಾ ಊಹಾಫೋಹಗಳಿಗೆ ತೆರೆ ಎಳೆದಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ತಾವು ರಾಷ್ಟ್ರಪತಿ ಚುನಾವಣೆಯ ಸ್ಪರ್ಧೆಯಲ್ಲಿಲ್ಲ ಎಂದು ಹೇಳಿದ್ದಾರೆ.

“ನಾನು ಅಧ್ಯಕ್ಷೀಯ ಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತೇನೆ ಎಂಬ ವರದಿಗಳು ಸಂಪೂರ್ಣವಾಗಿ ಸುಳ್ಳು. 300 ಕ್ಕೂ ಹೆಚ್ಚು ಸಂಸದರನ್ನು ಹೊಂದಿರುವ ಪಕ್ಷ ಬಿಜೆಪಿ. ಹೀಗಿರುವಾಗ ರಾಷ್ಟ್ರಪತಿ ಚುನಾವಣೆ ನಡೆಸಿದರೆ, ಅದರ ಫಲಿತಾಂಶ ಏನು ಎಂದು ನನಗೆ ತಿಳಿದಿದೆ. ಆದ್ದರಿಂದ ನಾನು ರಾಷ್ಟ್ರಪತಿ ಅಭ್ಯರ್ಥಿಯಾಗುವುದಿಲ್ಲ” ಎಂದು ಪವಾರ್ ಹೇಳಿದ್ದಾರೆ.

ಹಾಲಿ ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಡ್ ಅವರ ಅಧಿಕಾರಾವಧಿ 2022ರ ಜುಲೈ ತಿಂಗಳಿನಲ್ಲಿ ಅಂತ್ಯಗೊಳ್ಳಲಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ-ಸೇನಾ ಮರು ಮೈತ್ರಿ; ಠಾಕ್ರೆ-ಫಡ್ನವೀಸ್‌ ಜೊತೆಗೂಡುವ ಸಾಧ್ಯತೆ!

ಪವಾರ್‌ ಮತ್ತು ಪ್ರಶಾಂತ್‌ ಕಿಶೋರ್‌ ಅವರು ಇದೂವರೆಗೂ 3 ಬಾರಿ ಸಭೆ ನಡೆಸಿದ್ದಾರೆ. ಆದರೆ, ಸಭೆ ರಾಜಕೀಯವಾದುದ್ದಲ್ಲ ಎಂದು ಪವಾರ್ ಹೇಳಿದ್ದಾರೆ.

ಮಂಗಳವಾರ ಮಹಾರಾಷ್ಟ್ರದ ನಾಯಕರೊಂದಿಗೆ ನಡೆದ ಸಭೆಯಲ್ಲಿ ಕಾಂಗ್ರೆಸ್ ರಾಜ್ಯ ಪಕ್ಷದ ಅಧ್ಯಕ್ಷ ನಾನಾ ಪಟೋಲೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಪವಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ತನ್ನ ಪ್ರಾಭಲ್ಯ ಹೆಚ್ಚಿಸಿಕೊಳ್ಳಲು ಸಾಧ್ಯವಾಗದ ಕಾರಣ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಕಣ್ಗಾವಲಿನಲ್ಲಿರಿಸಿಕೊಳ್ಳುತ್ತಿದ್ದಾರೆ ಎಂದು ಪಟೋಲ್ ಇತ್ತೀಚಿನ ವಿಡಿಯೋವೊಂದರಲ್ಲಿ ಹೇಳಿದ್ದರು. ಅವರ ಹೇಳಿಕೆಯು ಮಹಾರಾಷ್ಟ್ರದ ಮೂರು ಪಕ್ಷಗಳ ಮೈತ್ರಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಲ್ಲಿ ಸಾಕಷ್ಟು ಗೊಂದಲಗಳನ್ನು ಉಂಟುಮಾಡಿದೆ.

“ನಾನಾ ಪಟೋಲೆ ಅವರ ಹೇಳಿಕೆಯಿಂದಾಗಿ ನನಗೆ ಕೋಪವಿಲ್ಲ. ರಾಜ್ಯದಲ್ಲಿ ತಮ್ಮ ಪಕ್ಷದ ನೆಲೆಯನ್ನು ಹೆಚ್ಚಿಸಿಕೊಳ್ಳುವ ಹಕ್ಕು ಅವರಿಗೆ ಇದೆ” ಎಂದು ಪವಾರ್ ಹೇಳಿದ್ದಾರೆ.

ಇದನ್ನೂ ಓದಿ: ಸ್ಪೀಕರ್‌ ಮೇಲೆ ಹಲ್ಲೆ ಆರೋಪ; ಮಹಾರಾಷ್ಟ್ರ 12 ಬಿಜೆಪಿ ಶಾಸಕರ ಅಮಾನತು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights