ಬಾಲಕಿಯನ್ನು ಅಪಹರಿಸಿ 5 ದಿನಗಳ ಕಾಲ ನಿರಂತರ ಅತ್ಯಾಚಾರ

16 ವರ್ಷದ ಬಾಲಕಿಯನ್ನು ಯುವಕನೊಬ್ಬ ಅಪಹರಿಸಿ ಐದು ದಿನಗಳ ಕಾಲ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 9 ರಂದು ಬಾಲಕಿ ತನ್ನ ಮನೆಯ ಸಮೀಪವಿರುವ ಹ್ಯಾಂಡ್ ಪಂಪ್‌ನಿಂದ ನೀರು ತುಂಬಲು ಹೋಗಿದ್ದಳು. ಆ ವೇಳೆ ಆಕೆಯನ್ನು ಅಪಹರಿಸಲಾಗಿದೆ ಎಂದು ಬಾಲಕಿಯ ಕುಟುಂಬಸ್ಥರು ಹೇಳಿದ್ದಾರೆ,.

ಐದು ದಿನಗಳ ನಂತರ ಬಾಲಕಿ ಯುವಕನ ಬಂಧನದಿಂದ ಪಾರಾಗಿದ್ದಾಳೆ ಮತ್ತು ಈ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ಊಹಾಪೋಹ: ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿಯನ್ನು ತೊರೆಯಲಿದ್ದಾರೆ ರಂದೀಪ್ ಸುರ್ಜೇವಾಲಾ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights