ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಭರ್ಜರಿ ಮಳೆ ..!

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ವರುಣನ ಅರ್ಭಟ ಜೋರಾಗಿಡ್ಡು ಜನಜೀವನ ಅಸ್ತವ್ಯಸ್ತವಾಗಿದೆ.

ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಗುರುವಾರವೂ ಭರ್ಜರಿ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಡೀ ದಿನ ಸುರಿದ ಧಾರಾಕಾರ ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ.

ಮಂಗಳೂರು, ಬಂಟ್ವಾಳ, ಮತ್ತು ಮುಲ್ಕಿಯಲ್ಲಿ ಐದು ಮನೆಗಳು ಹಾನಿಗೊಳಗಾಗಿವೆ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುಮಾರು 15 ಮನೆಗಳು ಭಾಗಶಃ ಹಾನಿಗೊಳಗಾಗಿವೆ.

ಹಾಸನ ಜಿಲ್ಲೆಯಲ್ಲಿ ಕಳೆದ  48 ಗಂಟೆಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆ-ಸಕಲೇಶಪುರ, ಆಲೂರು, ಹಾಸನ, ಬೇಲೂರು, ಅರಕಲಗೂಡಿನಲ್ಲಿ ವರುಣನ ಅಬ್ಬರ, ಜನಜೀವನ ಸಂಪೂರ್ಣ ಅಸ್ತವ್ಯಸ್ತ-ಮಲೆನಾಡು ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ-ಹೇಮಾವತಿ ಜಲಾಶಯಕ್ಕೆ ಒಳಹರಿವಿನಲ್ಲಿ ಏರಿಕೆಯಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಆರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದೆ. ಮಳೆಯಿಂದ ಅನೇಕ ಅವಾಂತರಗಳು ಜಿಲ್ಲೆಯಲ್ಲಿ ಸೃಷ್ಠಿಯಾಗಿವೆ. ಮಳೆ ವ್ಯಾಪಕವಾಗಿ ಆಗುತ್ತಿದ್ದು, ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಬೆಳೆ ಹಾನಿ ಸಂಭವಿಸಿದೆ. ಇನ್ನೂ ಜಿಲ್ಲೆಯಲ್ಲಿ ಇರೋ ಮಲಪ್ರಭಾ ಹಾಗೂ ಘಟಪ್ರಭಾ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಜಿಲ್ಲೆಯ ಪ್ರಸಿದ್ದ ಪ್ರವಾಸಿ ಕೇಂದ್ರ ಆಗಿರೋ ಗೋಕಾಕ್ ಫಾಲ್ಸ್ ಹಾಗೂ ಗೋಡಚನಮಲ್ಕಿ ಫಾಲ್ಸ್​​ಗೆ ವೀಕೆಂಡ್​​​ನಲ್ಲಿ ಜನರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಆದೇಶ ಹೊರಡಿಸಿದ್ದಾರೆ.

ಇಂದಿನಿಂದ ಜು.18ರವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್​ ಪಾಟೀಲ್​ ತಿಳಿಸಿದ್ದಾರೆ. ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ರೆಡ್, ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲೂ ಕೂಡ ಇಂದು ಮತ್ತು ನಾಳೆ ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಜು. 16ರಂದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಜು.17ರಂದು ಈ ಪ್ರದೇಶಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಪ್ರದೇಶದ ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights