ತಪ್ಪು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣಗಳು ಜನರನ್ನು ಕೊಲ್ಲುತ್ತಿವೆ: ಯುಎಸ್‌ ಅಧ್ಯಕ್ಷ ಆರೋಪ

ಕೊರೊನಾ ಲಸಿಕೆಯ ವಿಚಾರದಲ್ಲಿ ತಪ್ಪು ಮಾಹಿತಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಲಾಗುತ್ತಿದ್ದು, ಜಾಲತಾಣಗಳು ಇವುಗಳನ್ನು ನಿಯಂತ್ರಿಸದೇ ಜನರನ್ನು ಕೊಲ್ಲುತ್ತಿವೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್‌ ಹೇಳಿದ್ದಾರೆ.

ಕೊರೊನಾ ಲಸಿಕೆ ಹಾಕಿಸಿಕೊಳ್ಳದ ಜನರು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದು, ಈ ಪೈಕಿ ಸಾಕಷ್ಟು ಜನರು ಬಲಿಯಾಗುತ್ತಿದ್ದಾರೆ. ಕೊವಿಡ್ ಲಸಿಕೆ ಹಾಕಿಸಿಕೊಳ್ಳದವರ ಪೈಕಿ ಹೆಚ್ಚಿವರು ಲಸಿಕೆ ಮೇಲಿನ ಭಯದಿಂದಾಗಿ ಲಸಿಕೆ ಹಾಕಿಸಿಕೊಂಡಿಲ್ಲ. ಆ ಎಲ್ಲರಿಗೂ ಸಾಮಾಜಿಕ ಜಾಲತಾಣದಲ್ಲಿ ಲಸಿಕೆ ಬಗೆಗೆ ಭಯ ಭಿತ್ತಲಾಗಿದೆ. ಫೇಸ್‌ಬುಕ್‌ ಈ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ಅವರು ತಾಕೀತು ಮಾಡಿದ್ದಾರೆ.

ಕೋವಿಡ್‌ ಲಸಿಕೆ ಹಾಕಿಸಿಕೊಳ್ಳದವರಲ್ಲಷ್ಟೇ ಕೋವಿಡ್‌ ಸೋಂಕು ಕಾಣಿಸಿಕೊಳ್ಳುತ್ತಿದೆ. ಆದರೆ, ಸಾಮಾಜಿಕ ಜಾಲತಾಣಗಳು ಸುಳ್ಳು ಸುದ್ದಿಗಳನ್ನು ಭಿತ್ತರಿಸುವ ಮೂಲಕ ಜನರನ್ನು ಕೊಲ್ಲುತ್ತಿದ್ದಾರೆ ಎಂದು ಬೈಡನ್‌ ಆರೋಪಿಸಿದ್ದಾರೆ.

ಕೋವಿಡ್‌ ಲಸಿಕೆ ಬಗ್ಗೆ ಜನರು ವಿಶ್ವಾಸ ಕಳೆದುಕೊಳ್ಳಲು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ತಪ್ಪು ಮಾಹಿತಿಯೇ ಕಾರಣ. ತಪ್ಪು ಮಾಹಿತಿಗಳು ರವಾನೆಯಾಗದಂತೆ ತಡೆಯುವಲ್ಲಿ ಫೇಸ್‌ಬುಕ್‌ ಮತ್ತು ಇತರ ಸಾಮಾಜಿಕ ಜಾಲತಾಣಗಳು ವಿಫಲವಾಗಿವೆ. ಇಂತಹ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹರಿಸಲು ಪ್ರಯತ್ನಿಸಬೇಕು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಊಹಾಪೋಹ: ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿಯನ್ನು ತೊರೆಯಲಿದ್ದಾರೆ ರಂದೀಪ್ ಸುರ್ಜೇವಾಲಾ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights