ಮಾಜಿ ಸಂಸದ ಜಿ. ಮಾದೇಗೌಡ ವಿಧಿವಶ..!

ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶರಾಗಿದ್ದಾರೆ. ಕೆಎಂ ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾದೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.

ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿದ್ದ ಮಾದೇಗೌಡರು ಶಾಸಕರಾಗಿ, ಸಂಸದರಾಗಿಯೂ ಕಾರ್ಯನಿರ್ವಹಿಸಿದ್ದರು. ಕಾವೇರಿ ನದಿ ನೀರಿನ ಹೋರಾಟಗಳ ರೂವಾರಿಯಾಗಿದ್ದ ಅವರು, ನೀರು ಬಿಡುವ ವಿಚಾರದಲ್ಲಿ ಸರ್ಕಾರದ ನಿಲುವು ವಿರೋಧಿಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಗೆ ಎಲ್ಲಾ ಪಕ್ಷಗಳಲ್ಲೂ ಆತ್ಮೀಯರಿದ್ದರು. ಪಕ್ಷಾತೀತ ಜನಾನುರಾಗಿ ನಾಯಕರಾಗಿದ್ದರು. ಕಾವೇರಿ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights