ಉತ್ತರ ಪ್ರದೇಶ ಸಿ-ವೋಟರ್ ಸಮೀಕ್ಷೆ: ಮತ್ತೆ ಅಧಿಕಾರ ಹಿಡಿಯಲಿದೆ ಬಿಜೆಪಿ; ಕಾಂಗ್ರೆಸ್‌ ಕಳಪೆ ಪ್ರದರ್ಶನ ಸಾಧ್ಯತೆ!

2022ರ ಆರಂಭದಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಎಲ್ಲಾ ರಾಜಕೀಯ ಪಕ್ಷಗಳು ಉ.ಪ್ರದೇಶವನ್ನು ಗೆಲ್ಲಲು ಭಾರೀ ಕಸರತ್ತು ನಡೆಸುತ್ತಿವೆ. ಅಲ್ಲದೆ, ಈ ಬಾರಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಎಂದು ಬಿಎಸ್‌ಪಿ ಮತ್ತು ಎಸ್‌ಪಿ ಪಕ್ಷಗಳು ಘೋಷಿಸಿವೆ. ಇನ್ನು ಆಡಳಿತಾರೂಢ ಬಿಜೆಪಿ ಸ್ವಂತ ಬಲದಲ್ಲಿ ಮತ್ತೊಮ್ಮೆ ಗೆಲ್ಲುತ್ತೇವೆ ಎಂಬ ಉತ್ಸುಕದಲ್ಲಿದೆ. ಕಾಂಗ್ರೆಸ್‌ ಪಕ್ಷವೂ ಅನಿವಾರ್ಯವಾಗಿ ಏಕಾಂಗಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಈ ಮಧ್ಯೆ, ಸಿವೋಟರ್ ಮತ್ತು ಟೈಮ್ಸ್‌ ನೌ ಜಂಟಿಯಾಗಿ ಉತ್ತರ ಪ್ರದೇಶದಲ್ಲಿ ಸಮೀಕ್ಷೆಯನ್ನು ನಡೆಸಿದ್ದು, ಬಿಜೆಪಿ ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಪೈಪೋಟಿಯಲ್ಲಿ ಹೋರಾಟ ನಡೆಸಲಿವೆ. ಸಮಾಜವಾದಿ ಪಕ್ಷ ಮತ್ತೆ ಅಧಿಕಾರಕ್ಕೇರುವ ತವಕದಲ್ಲಿದ್ದರೆ, ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ರಣತಂತ್ರ ರೂಪಿಸುತ್ತಿದೆ. ಉಳಿದಂತೆ ಕಾಂಗ್ರೆಸ್ ಮತು ಬಿಎಸ್‌ಪಿ ಪಕ್ಷಗಳು ತಮ್ಮದೇ ಆದ ಗೇಮ್‌ ಪ್ಲಾನ್‌ ರೂಪಿಸುತ್ತಿವೆ. ಬಿಜೆಪಿ ಮತ್ತೆ ಅಧಿಕಾರ ಹಿಡಿಯುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ: 2022ರ ಯುಪಿ ಚುನಾವಣೆ: ‘ಹಿಂದೂತ್ವ ಐಕಾನ್’ ಯಾರು – ಮೋದಿ ಅಥವಾ ಯೋಗಿ?

2024ರ ಲೋಕಸಭಾ ಚುನಾವಣೆಯಲ್ಲಿಯೂ ಉತ್ತರ ಪ್ರದೇಶದ ಈ ಚುನಾವಣೆ ಪ್ರಭಾವ ಬೀರುತ್ತದೆ ಎಂದು ಹೇಳಲಾಗಿದ್ದು, ಪ್ರಮುಖವಾಗಿ ಈ ನಾಲ್ಕು ಪಕ್ಷಗಳು ಈ ಚುನಾವಣೆಯನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದು, ತಮ್ಮದೇ ಆದ ಪ್ರಾಭಲ್ಯವನ್ನು ಪ್ರದರ್ಶಿಸಲು ಮುಂದಾಗಿವೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಹಾಗೂ ಯೋಗಿ ಆದತ್ಯಾನಾಥ್‌ ಪರವಾಗಿ ಜನರ ಒಲವು ಇದೆ. ರಾಮ ಮಂದಿರ ನಿರ್ಮಾಣದ ವಿಚಾರವೂ ಬಿಜೆಪಿಗೆ ಮತಗಳನ್ನು ತಂದುಕೊಡಲಿದೆ. ಯೋಗಿ ನಾಯಕತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.

Image

ಸಮೀಕ್ಷೆ ಪ್ರಕಾರ, ಬಿಜೆಪಿ ಪರವಾಗಿ 43.1%, ಅಖಿಲೇಶ್ ನೇತೃತ್ವದ ಸಮಾಜವಾದಿ ಪಕ್ಷದ ಪರವಾಗಿ 29.6%, ಮಾಯಾವತಿ ನೇತೃತ್ವದ ಬಿಎಸ್‌ಪಿ ಪರವಾಗಿ 10.1%, ಕಾಂಗ್ರೆಸ್ ಪರವಾಗಿ  8.1%ರಷ್ಟು ಜನರು ಒಲವು ತೋರಿದ್ದಾರೆ ಎಂದು ಹೇಳಲಾಗಿದೆ.

ಉಳಿದಂತೆ, ಇತರ ಪಕ್ಷಗಳ ಪರವಾಗಿ 3.1% ಒಲವು ತೋರಿದ್ದಾರೆ ಎಂದು ಸಮೀಕ್ಷೆ ಗುರುತಿಸಿದೆ.

ಇದನ್ನೂ ಓದಿ: BJP v/s TMC: ಉಳಿವು ಮತ್ತು ಮರಳಿ ಪಡೆಯುವ ಯತ್ನದಲ್ಲಿ ಬಂಗಾಳದಲ್ಲಿ ಭಾರೀ ಹಿಂಸಾಚಾರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights