ಹಾಡಹಗಲೇ ಮಾರಕಾಸ್ತ್ರಗಳಿಂದ ವಕೀಲರ ಮೇಲೆ ಹಲ್ಲೆ : ಮೂವರ ಬಂಧನ!

ಹಾಡಹಗಲೇ ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ವಕೀಲರ ಮೇಲೆ ಗುಂಪೊಂದು ಹಲ್ಲೆ ಮಾಡಿದ ಘಟನೆ ಮುಂಬೈಯನ್ನು ಬೆಚ್ಚಿ ಬೀಳಿಸಿದೆ.

ಭಾನುವಾರ ಮಧ್ಯಾಹ್ನ ಕಾರ್ಯನಿರತ ವಕೀಲರ ಮೇಲೆ ಮುಂಬೈ ರಸ್ತೆಯಲ್ಲಿ ಕತ್ತಿ ಮತ್ತು ರಾಡ್ ಗಳಿಂದ 15 ಕ್ಕೂ ಹೆಚ್ಚು ಜನರ ಗುಂಪೊಂದು ಹಲ್ಲೆ ನಡೆಸಿದೆ. ಈ ಪೈಕಿ ಮೂವರನ್ನು ಬಂಧಿಸಲಾಗಿದ್ದು ವಕೀಲರು ಸ್ಥಳದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೂ ಗಂಭೀರ ಗಾಯಗೊಂಡಿದ್ದಾರೆ.

ಕೆಲವು ಜನರು ಕತ್ತಿಗಳನ್ನು ಹೊತ್ತುಕೊಂಡು ಸಾರ್ವಜನಿಕರ ಮುಂದೆಯೇ ವಕೀಲರ ಮೇಲೆ ಹಲ್ಲೆ ಮಾಡುವ ದೃಶ್ಯಗಳು ಹೊರಬಂದಿವೆ. ಕೆಲವರು ವಕೀಲರನ್ನು ಉಳಿಸಲು ಪ್ರಯತ್ನಿಸಿದಾಗ, ಅವರ ಮೇಲೂ ಹಲ್ಲೆ ನಡೆಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಪಶ್ಚಿಮ ದಹಿಸಾರ್‌ನಲ್ಲಿರುವ ಎಂಎಚ್‌ಬಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಗಲಭೆ ಮತ್ತು ಕೊಲೆ ಯತ್ನಕ್ಕೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಆಸ್ತಿ ವಿವಾದ ದಾಳಿ ನಡೆದಿರಬಹುದು ಎಂದು ಊಹಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights