ಪಂಜಾಬ್‌ ಕಾಂಗ್ರೆಸ್‌ ಬಿಕ್ಕಟ್ಟು ಶಮನ?; ನವಜೋತ್‌ ಸಿಧು ರಾಜ್ಯಾಧ್ಯಕ್ಷ; ಅಮರಿಂದರ್ ಸಿಎಂ ಆಗಿ ಮುಂದುವರಿಕೆ?

ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಂಜಾಬ್‌ ಕಾಂಗ್ರೆಸ್‌ನಲ್ಲಿಯೂ ಬಂಡಾಯ ಕಾವು ಮುನ್ನಲೆಯಲ್ಲಿದೆ. ಸಿಎಂ ಅಮರಿಂದರ್‌ ಸಿಂಗ್ ವಿರುದ್ದ ನವಜೋತ್‌ ಸಿಂಗ್‌ ಸಿಧು ಅವರು ಸಿಟ್ಟಾಗಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಉಂಟಾಗಿತ್ತು. ಇದೀಗ ಬಂಡಾಯವನ್ನು ಶಮನ ಮಾಡಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್‌ ಸಿಧು ಅವರನ್ನು ಕಾಂಗ್ರೆಸ್‌ ರಾಜ್ಯಾಧ್ಯಕ್ಷರಾಗಿ ನೇಮಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಬಿಕ್ಕಟ್ಟು ಶಮನಕ್ಕಾಗಿ ಪಂಜಾಬ್‌ನ ಕಾಂಗ್ರೆಸ್‌ ಶಾಸಕರು ಹಾಗು ಜಿಲ್ಲಾ ಘಟಕಗಳ ಅಧ್ಯಕ್ಷರ ಸಭೆಯನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಸುನೀಲ್ ಜಖಾರ್ ಕರೆದಿದ್ದಾರೆ. ಈ ಸಭೆಯಲ್ಲಿ ಪಂಜಾಬ್ ರಾಜ್ಯ ಕಾಂಗ್ರೆಸ್ ಘಟಕದ ಪುನರ್ ರಚನೆಯ ಬಗ್ಗೆ ಚರ್ಚೆಗಳು ಹಾಗೂ ಸೂಚನೆಗಳನ್ನು ನೀಡಲಾಗುವುದು ಎಂದು ಹೇಳಲಾಗಿದೆ.

ಮಂಗಳವಾರ ಕಾಂಗ್ರೆಸ್‌ ಹೈಕಮಾಂಡ್‌ ಸಭೆ ನಡೆಸಲಿದ್ದು, ಸಭೆಯಲ್ಲಿ ಪಂಜಾಬ್‌ ಕಾಂಗ್ರೆಸ್‌ಗೆ ಸಂಬಂಧಿಸಿದಂತೆ ಹಲವು ತೀರ್ಮಾನಗಳನ್ನು ಪಕ್ಷವು ತೆಗೆದುಕೊಳ್ಳಲಿದೆ. ಹೈಕಮಾಂಡ್‌ ತೀರ್ಮಾನವನ್ನು ಎಲ್ಲರೂ ಸ್ವಾಗತಿಸಬೇಕು ಎಂದು ಹೇಳಿದ್ದು, ಹೈಕಮಾಂಡ್‌ನ ನಿರ್ಣಯವನ್ನು ಎಲ್ಲಾ ಶಾಸಕರು ಹಾಗೂ ಜಿಲ್ಲಾ ಅಧ್ಯಕ್ಷರು ಅಂಗೀಕರಿಸಲಾಗುವುದು ಎಂದು ತೀರ್ಮಾನಿಸಲಾಗುವುದು ಎಂದು ಸುನೀಲ್‌ ಖಜಾರ್ ತಿಳಿಸಿದ್ದಾರೆ.

ಪಂಜಾಬ್ ಘಟಕದ ಆಂತರಿಕ ಭಿನ್ನಾಭಿಪ್ರಾಯ ಶಮನಗೊಳಿಸುವ ನಿಟ್ಟಿನಲ್ಲಿ ಹೈಕಮಾಂಡ್ ನಿಂದ ನವಜೋತ್ ಸಿಂಗ್ ಸಿಧು ಪಕ್ಷದ ಅಧ್ಯಕ್ಷರನ್ನಾಗಿ ಹಾಗೂ ಇಬ್ಬರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಿದೆ. ಅಮರಿಂದರ್ ಸಿಂಗ್‌ ಅವರು ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಹೇಳಲಾಗಿದೆ.

2019 ರಲ್ಲಿ ಪಂಜಾಬ್ ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ್ದ ಸಿಧು, ಮುಖ್ಯಮಂತ್ರಿ ಸಿಂಗ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಅಲ್ಲದೆ, 2015ರಲ್ಲಿ ನಡೆದ ಘಟನೆ ಮತ್ತು ಪೊಲೀಸ್‌ ಗುಂಡಿನ ದಾಳಿ ಪ್ರಕರಣದಲ್ಲಿ ನ್ಯಾಯ ವಿಳಂಭವಾಗಿದೆ ಎಂದು ಸರ್ಕಾರದ ವಿರುದ್ದ ಅಸಮಾಧಾನ ಹೊರಹಾಕಿದ್ದರು.

ಇದನ್ನೂ ಓದಿ: ಪಂಜಾಬ್‌ ಕಾಂಗ್ರೆಸ್‌ನಲ್ಲೂ ಆಂತರಿಕ ಬಿಕ್ಕಟ್ಟು; ಅಮರಿಂದರ್‌ ಮತ್ತು ಸಿಧು ನಡುವೆ ನಾಯಕತ್ವದ ಕುಸ್ತಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights