ಅಶ್ಲೀಲ ಚಿತ್ರಗಳ ಪ್ರಸಾರ : ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಪತಿ ಅರೆಸ್ಟ್..!

ಅಶ್ಲೀಲ ಚಿತ್ರಗಳ ಪ್ರಸಾರ ಪ್ರಕರಣದಲ್ಲಿ ಖ್ಯಾತ ನಟಿ ಶಿಲ್ಪಾ ಶೆಟ್ಟಿಯ ಪತಿ ರಾಜ್ ಕುಂದ್ರಾ ಬಂಧನಕ್ಕೊಳಗಾಗಿದ್ದಾರೆ.

ಅಶ್ಲೀಲ ಚಿತ್ರಗಳ ಪ್ರಸಾರ ಪ್ರಕರಣದ ಪ್ರಮುಖ ಆರೋಪಿಯಾಗಿ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪುರಾವೆಗಳು ಸಿಕ್ಕ ಬೆನ್ನಲ್ಲೆ ಕುಂದ್ರಾ ಅವರನ್ನು ಬಂಧಿಸಲಾಗಿದೆ.

“ಅಶ್ಲೀಲ ಚಲನಚಿತ್ರಗಳ ರಚನೆ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಕಟಿಸುವ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬಯಿ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು 19/7/21 ರಂದು ಬಂಧಿಸಲಾಗಿದ್ದು ಅವರ ವಿರುದ್ಧ ಸಾಕಷ್ಟು ಪುರಾವೆಗಳಿವೆ “ಎಂದು ಮುಂಬೈ ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಹೇಳಿಕೆಯನ್ನು ತಳ್ಳಿ ಹಾಕಿದ ರಾಜ್ ಕುಂದ್ರಾ ಈ ಪ್ರಕರಣದಲ್ಲಿ ನಿರೀಕ್ಷಿತ ಜಾಮೀನು ಕೋರಿದ್ದರು.

ಶಿಲ್ಪಾ ಶೆಟ್ಟಿ 2009 ರಲ್ಲಿ ರಾಜ್ ಕುಂದ್ರಾ ಅವರನ್ನು ವಿವಾಹವಾದರು. ದಂಪತಿಗೆ ವಿಯಾನ್ ರಾಜ್ ಕುಂದ್ರಾ ಮತ್ತು ಸಮಿಷಾ ಎಂಬ ಇಬ್ಬರು ಮಕ್ಕಳಿದ್ದಾರೆ. ರಾಜ್ ಕುಂದ್ರಾ ಅವರು ಜೆಎಲ್ ಸ್ಟ್ರೀಮ್ ಎಂಬ ಅಪ್ಲಿಕೇಶನ್‌ನ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ತಂಡದ ರಾಜಸ್ಥಾನ್ ರಾಯಲ್ಸ್‌ನ ಮಾಲೀಕರಾಗಿದ್ದರು.

2013 ರಲ್ಲಿ, ಭಾರತೀಯ ಕ್ರಿಕೆಟ್ ಅನ್ನು ಆವರಿಸಿರುವ ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ರಾಜ್ ಕುಂದ್ರಾ ಅವರನ್ನು ಪ್ರಶ್ನಿಸಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights