ಫೋನ್‌ ಹ್ಯಾಕ್‌ ಮಾಡಿದ ನಂತರವೂ ಬಿಜೆಪಿ ಚುನಾವಣೆಯನ್ನು ಗೆಲ್ಲಲು ಆಗಲಿಲ್ಲ; ಟಿಎಂಸಿ ವ್ಯಂಗ್ಯ

ಪೆಗಾಸಸ್ ಪ್ರಾಜೆಕ್ಟ್‌ನಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದೆ ಎಂದು ಕೇಳಿಬಂದಿದೆ. ಈ ಬಳಿಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಟಿಎಂಸಿ, ಪೋನ್‌ ಹ್ಯಾಕ್‌ ಮಾಡಿದ ನಂತರವೂ ಬಂಗಾಳದಲ್ಲಿ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ ಎಂಧು ವ್ಯಂಗ್ಯವಾಡಿದೆ.

’ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್ ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಇದರಲ್ಲಿ ಟಿಎಂಸಿ ಪಕ್ಷದ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಹೆಸರುಗಳು ಪಟ್ಟಿಯಲ್ಲಿವೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ನ್ಯಾಯಾಧೀಶರು, ಹಲವಾರು ಉದ್ಯಮಿಗಳು ಮತ್ತು ಹೋರಾಟಗಾರರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ಇದನ್ನೂ ಓದಿ: Pegasus ಗೂಢಚರ್ಯೆಯ ಅಸಲಿ ಕ್ರೋನಾಲಜಿ ಏನು ಗೊತ್ತೇ? ಡೀಟೇಲ್ಸ್‌

ಭಾನುವಾರ ಪ್ರಕಟವಾದ ವರದಿಯ ಪ್ರಕಾರ, ಟಿಎಂಸಿಯ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಫೋನ್ ನಂಬರ್‌ ಅನ್ನು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಹ್ಯಾಕ್ ಮಾಡಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸೋದರಳಿಯ ಮತ್ತು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿರುವ ಅಭಿಷೇಕ್ ಬ್ಯಾನರ್ಜಿಯ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಅಭಿಷೇಕ್ ಬ್ಯಾನರ್ಜಿ, “ಸೋತವರಿಗಾಗಿ ಎರಡು ನಿಮಿಷಗಳ ಮೌನವಹಿಸಿ. ಇಡಿ, ಸಿಬಿಐ, ಎನ್ಐಎ, ಐಟಿ, ಇಸಿಐ, ಬಿಜೆಪಿಯ ಹಣ ಮತ್ತು ಶಕ್ತಿ ಇದರ ಜೊತೆಗೆ ಪೆಗಾಸಸ್ ಸ್ಪೈಯಿಂಗ್… ಇಷ್ಟಿದ್ದರೂ ಅಮಿತ್‌ ಶಾ ಅವರಂತಹವರು 2021ರ ಬಂಗಾಳ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ದಯವಿಟ್ಟು 2024 ರಲ್ಲಿ ಮತ್ತಷ್ಟು ಉತ್ತಮ ಸಂಪನ್ಮೂಲಗಳೊಂದಿಗೆ ಸಿದ್ಧರಾಗಿ!” ಎಂದು ವ್ಯಂಗ್ಯವಾಡಿದ್ದಾರೆ.

ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಬಿಜೆಪಿ ಭಯ ಮತ್ತು ಮನೋರೋಗದಿಂದ ಬಳಲುತ್ತಿದೆ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಬಳಸಿ ಭಾರತೀಯ ಪತ್ರಕರ್ತರ ಮೇಲೆ ನಿಗಾ; ವಿರೋಧಿಗಳನ್ನು ನಿಯಂತ್ರಿಸಲು ಸರ್ಕಾರ ಯತ್ನ!?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights