‘ಸಾವಿರಾರು ಕೋಟಿ ದುಡ್ಡು ಹೊಡೆಯೋ ಯೋಜನೆಗೆ ಸಿಎಂ ಅನುಮತಿ’ ಹೆಚ್ಡಿಕೆ ಗಂಭೀರ ಆರೋಪ!

ಸಿಎಂ ತರಾತುರಿಯಲ್ಲಿ ಸಾವಿರಾರು ಕೋಟಿಗಳ ಯೋಜನೆಗೆ ಅನುಮತಿ ನೀಡಿ ದುಡ್ಡು ಹೊಡೆಯುವ ಯೋಜನೆ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್ಡಿಕೆ.” ನಾಳಿದ್ದು ರಾಜಿನಾಮೆ ನೀಡ್ತಾರೆ ಎನ್ನುತ್ತಿದ್ದಾರೆ, ಅದೇನೋ ನನಗೆ ಗೊತ್ತಿಲ್ಲ. ಆದ್ರೆ ಸಿಎಂ ತರಾತುರಿಯಲ್ಲಿ ಸಾವಿರಾರು ಕೋಟಿಗಳ ಯೋಜನೆಗೆ ಅನುಮತಿ ನೀಡ್ತಿದ್ದಾರೆ. ನಿರಾವರಿ ಇಲಾಖೆಯ 4 ನಿಗಮಗಳಲ್ಲಿ 12ಸಾವಿರ ಕೋಟಿ ಯೋಜನೆಗೆ ಇವತ್ತಿನ ಸಭೆಯಲ್ಲಿ ಯಡಿಯೂರಪ್ಪ ಅನುಮತಿ ನೀಡ್ತಿದ್ದಾರೆ. 12ಸಾವಿರ ಕೋಟಿ ಯೋಜನೆಯಲ್ಲಿ ಕಾವೇರಿ ನಿಗಮಕ್ಕೆ ಕೇವಲ 1ಸಾವಿರ ಕೋಟಿ ನೀಡಿದ್ದಾರೆ. ಆದರೆ ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಹಳೇ ಕರ್ನಾಟಕ ಭಾಗದಿಂದ ಹೋಗುತ್ತಿದೆ. ಆ ಭಾಗಕ್ಕೆ ನೀಡುವ ಆದ್ಯತೆಯನ್ನ ಈ ಭಾಗಕ್ಕೂ ನೀಡಿ ” ಎಂದಿದ್ದಾರೆ.

‘ನನಗೆ ಹಳೇ ಕರ್ನಾಟಕ ಹೊಸ ಕರ್ನಾಟಕದ ಪ್ರಶ್ನೆ ಅಲ್ಲ. ಇಲ್ಲಿನ ಜ‌ನ ನಿಮಗೇನು ದ್ರೋಹ ಮಾಡಿದ್ದಾರೆ.? ಈ ಭಾಗಕ್ಕೆ 1ಸಾವಿರ ಕೋಟಿ ಆ ಭಾಗಕ್ಕೆ 11ಸಾವಿರ ಕೋಟಿ ಯೋಜನೆ ಯಾಕೆ? ನಿಜವಾಗಲೂ ಆ ಭಾಗದ ಜನರಿಗೆ ನೀರು ಕೊಡಲು ಯೋಜನೆ ರೂಪಿಸಿದ್ದೀರಾ.? ಅಥವಾ ದುಡ್ಡು ಹೊಡೆಯುವ ಯೋಜನೆ ಮಾಡಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

2ದಿನದಲ್ಲಿ ಸಿಎಂ‌ ಬದಲಾಗುವುದಾದರೆ ತರಾತುರಿಯಲ್ಲಿ 12ಸಾವಿರ ಕೋಟಿ ಯೋಜನೆ ಯಾಕೆ.? ಅವರಿಗೆ ಅಂತ ದರದ್ ಏನಿದೆ? ಯಾವ ಕಾರಣಕ್ಕಾಗಿ ಈ ತೀರ್ಮಾನ.? ಈಗಲೂ ದುಡ್ಡು ಹೊಡೆಯಲಿಕ್ಕಾ, ರಾಜ್ಯದ ತೆರಿಗೆ ಹಣ ಲೂಟಿ ಮಾಡಲಿಕ್ಕಾ.? ಎಂದು ಕಿಡಿ ಕಾರಿದ್ದಾರೆ.

Spread the love

Leave a Reply

Your email address will not be published. Required fields are marked *