ಮುಂಬಯಿಯಲ್ಲಿ ಭಾರಿ ಮಳೆ : ಕಟ್ಟಡ ಕುಸಿದು 3 ಮಂದಿ ಸಾವು – ಹತ್ತು ಮಂದಿಗೆ ಗಾಯ!

ಮುಂಬಯಿಯಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿದು 3 ಮಂದಿ ಸಾವನ್ನಪ್ಪಿದ್ದಾರೆ. ಹೌದು.. ಮುಂಬೈನ ಗೋವಂಡಿ ಪ್ರದೇಶದ ಶಿವಾಜಿ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಕೆಲವರು ಗಂಭೀರ ಸ್ಥಿತಿಯಲ್ಲಿದ್ದಾರೆ.

ಬಿಎಂಸಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪಿ ಅವಶೇಷಗಳಡಿ ಸಿಲುಕಿದವರನ್ನು ರಕ್ಷಣೆ ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಮುಂಬೈಯಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಕಳೆದ ವಾರಗಳಲ್ಲಿ ಮುಂಬೈನಲ್ಲಿ ಕಟ್ಟಡ ಕುಸಿದ ಹಲವಾರು ಘಟನೆಗಳು ನಡೆದಿವೆ. ಮುಂಬೈ ಮತ್ತು ಉಪನಗರಗಳಲ್ಲಿ ಶುಕ್ರವಾರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾನುವಾರ ಮುಂಬೈಯಲ್ಲಿ ಗುಡುಗು ಸಹಿತ ಭಾರಿ ಮಳೆಯಿಂದಾಗಿ ಈವರೆಗೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಮಳೆ ನೀರಿನಿಂದಾಗಿ ರಸ್ತೆಗಳು ನದಿಗಳಂತಾಗಿದ್ದು, ಸಂಚಾರ ಅಡೆತಡೆಗಳು ಸಂಭವಿಸಿವೆ.

ಮುಂಬೈನಲ್ಲಿ ಭಾನುವಾರ ಸಂಭವಿಸಿದ ಭೂಕುಸಿತದಿಂದಾಗಿ ಗೋಡೆ ಕುಸಿದ ಎರಡು ವಿಭಿನ್ನ ಘಟನೆಗಳಲ್ಲಿ 30 ಜನರು ಸಾವನ್ನಪ್ಪಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights