30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅಡುಗೆ ಕಾರ್ಮಿಕನ ಬಂಧನ!

ಹೋಟೆಲ್ ಒಂದರಲ್ಲಿ ಅಡುಗೆ ಕಾರ್ಮಿಕನೊಬ್ಬ ಸುಮಾರು 25ರಿಂದ 30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಆ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಆ ಆರೋಪಿಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ.

ಗೋವಾದ ನಿವಾಸಿಯಾದ ಆತನನ್ನು ಮಂಗಳವಾರ ಗೋವಾದ ಪೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯು ಮಕ್ಕಳ ಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರಿಸಿ ಭಾರತೀಯರಿಗೆ ಮತ್ತು ವಿದೇಶಿಯರಿಗೆ ಮಾರಾಟ ಮಾಡಿದ್ದಾನೆ ಎಂದು ಸಿಬಿಐ ಪೊಲೀಸರು ತಿಳಿಸಿದ್ದಾರೆ.

ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿ ಭಾಗಿಯಾಗಿದ್ದಾನೆ. 29 ವರ್ಷದ ಆರೋಪಿ ಮತ್ತು ಇರತ ಅಪರಿಚಿತರ ವಿರುದ್ದ 2020 ರ ಜೂನ್ 22 ರಂದು ಸಿಬಿಐ ಪ್ರಕರಣ ದಾಖಲಿಸಿತ್ತು.

“ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ಒಳಗೊಂಡಿರುವ ಛಾಯಾಚಿತ್ರಗಳು ಮತ್ತು ವಿಡಿಯೊಗಳನ್ನು ಅಂತರ್ಜಾಲದ ಸೌಲಭ್ಯವನ್ನು ಬಳಸಿಕೊಂಡು ಆರೋಪಿಯು ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ನಂತರ, ಫೋಟೋಗಳು ಮತ್ತು ವಿಡಿಯೊಗಳನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡಲಾಗಿದೆ” ಎಂದು ಸಿಬಿಐ ಮಾಹಿತಿ ನೀಡಿದೆ.

ದೇಶದ ಹೊರಗಿನ ಇತರ ಶಿಶುಕಾಮಿಗಳೊಂದಿಗೆ ಸಂಪರ್ಕ ಸಾಧಿಸಲು ಇ- ಮೇಲ್ ಸೌಲಭ್ಯವನ್ನು ಸಹ ಆರೋಪಿ ಬಳಸಿದ್ದಾನೆ ಎಂದು ಸಿಬಿಐ ತಿಳಿಸಿದೆ.

ವಿದೇಶಿ ವ್ಯಕ್ತಿಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು ವ್ಯಾಪಾರ ಮಾಡಲು ಆರೋಪಿಗಳು ಸಾಮಾಜಿಕ ಜಾಲತಾಣಗಳ ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನಂತಹ ಪ್ಲಾಟ್‌ಫಾರ್ಮ್‌ಗಳನ್ನು ಸಹ ಬಳಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋವಾದ ಆರೋಪಿಗಳ ನಿವಾಸದಲ್ಲಿ ನಡೆಸಿದ ಶೋಧದ ಸಮಯದಲ್ಲಿ, ಮೊಬೈಲ್ ಫೋನ್, ಹಾರ್ಡ್ ಡ್ರೈವ್, ಪೆಂಡ್ರೈವ್ ಮತ್ತು ಲ್ಯಾಪ್ಟಾಪ್ ಅನ್ನು ಸಿಬಿಐ ವಶಪಡಿಸಿಕೊಂಡಿದೆ.

Read Also: ಕೊರೊನಾ: ಮುಂದಿನವಾರ 2-6 ವರ್ಷದ ಮಕ್ಕಳಿಗೆ ಕೋವಾಕ್ಸಿನ್‌ 2ನೇ ಡೋಸ್‌ ಪ್ರಯೋಗ ಆರಂಭ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights