ಶಿಕ್ಷಕಿ ಮೇಲೆ ಆಸಿಡ್ ದಾಳಿ; ಅಪರಾಧಿಗೆ ಜೀವಾವಧಿ ಶಿಕ್ಷೆ – 10 ಲಕ್ಷ ದಂಡ!

ಮದುವೆ ಪ್ರಸ್ತಾಪವನ್ನು ನಿರಾಕರಿಸಿದ ಕಾರಣಕ್ಕೆ ಶಿಕ್ಷಕಿಯ ಮೇಲೆ ಆಸಿಡ್ ದಾಳಿ ನಡೆಸಿದ್ದ ದಾವಣಗೆರೆ ಜಿಲ್ಲೆಯ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ದಂಡ ವಿಧಿಸಿ ಕರ್ನಾಟಕ ಹೈಕೋರ್ಟ್‌ ತೀರ್ಪು ನೀಡಿದೆ.

ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಯುವತಿಗೆ 2014ರಲ್ಲಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಿವಾಸಿ ಮಹೇಶ್ ಎಂಬಾತನ್ನು ವಿವಾಹವಾಗುವಂತೆ ಪ್ರಸ್ತಾಪಿಸಾಗಿತ್ತು. ಈ ವಿವಾಹ ಪ್ರಸ್ತಾಪವನ್ನು ಯುವತಿ ತಿರಸ್ಕರಿದ್ದರು. ಆ ಕಾರಣಕ್ಕಾಗಿ ಆಕೆಯ ಮೇಲೆ ಆರೋಪಿ ಮಹೇಶ್‌ ಆಡಿಸ್‌ ದಾಳಿ ನಡೆಸಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹೇಶ್‌ನನ್ನು ಬಂಧಿಸಿಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ, ದಾವಣಗೆರೆಯ ಜಿಲ್ಲಾ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ದಂಡ ವಿಧಿಸಿತ್ತು.

ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ. ಅರ್ಜಿಯ ವಿಚಾರಣೆ ನಡೆಸಿರುವ ಕರ್ನಾಟಕ ಹೈಕೋರ್ಟ್‌, ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ನ್ಯಾಯಮೂರ್ತಿ ವಿ. ಶ್ರೀಶಾನಂದ್‌ ಅವರಿದ್ದ ಪೀಠ, ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದು, ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ದಂಡ ಶಿಕ್ಷೆಯನ್ನು ವಿಧಿಸಿದೆ.

ಆಸಿಡ್‌ ದಾಳಿಗೆ ಒಳಗಾಗಿರುವ ಯುವತಿಗೆ ಆರ್ಥಿಕ ನೆರವು ಒದಗಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

Read Also: ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌: ಚಿನ್ನದ ಪದಕ ಗೆದ್ದ ಕುಸ್ತಿಪಟು ಪ್ರಿಯಾ ಮಲಿಕ್!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights