Big Breaking: ರಾಜೀನಾಮೆ ನೀಡುವುದಾಗಿ ಯಡಿಯೂರಪ್ಪ ಘೋಷಣೆ!

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗೆ ಬಿಎಸ್‌ವೈ ತೆರೆ ಎಳೆದಿದ್ದಾರೆ.

ಮಧ್ಯಾಹ್ನ ರಾಜ್ಯಪಾಲರ ಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ನೀಡುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಊಟದ ನಂತರ ನಾನು ರಾಜ್ಯಪಾಲರನ್ನು ಭೇಟಿಯಾಗುತ್ತೇನೆ, ರಾಜೀನಾಮೆ ಪತ್ರ ಸಲ್ಲಿಸುತ್ತೇವೆ” ಎಂದು ಘೋಷಿಸಿದ್ದಾರೆ.

ದುಃಖತಪ್ತರಾಗಿ ಮಾತನಾಡಿದ ಅವರು “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಅಮಿತ್‌ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದತಿಳಿಸುತ್ತೇನೆ. ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ” ಎಂದರು.

ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆಯಲ್ಲಿ ಹೋಗಿ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಕರ್ನಾಕದ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್ ಯಡಿಯೂರಪ್ಪನವರು ಒಮ್ಮೆಯೂ ಪೂರ್ಣಾವಧಿಯಾಗಿ ಅಧಿಕಾರಿ ನಿರ್ವಹಿಸಲು ಸಾಧ್ಯವಾಗಿಲ್ಲ. ಇಂದಿಗೆ ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷವಾಗಿತ್ತು. ಸಂಭ್ರಮಾಚರಣೆಯ ದಿನವೇ ಅವರು ರಾಜೀನಾಮೆ ಘೋಷಿಸಿದ್ದಾರೆ.

ಯಡಿಯೂರಪ್ಪ ನಿರ್ಗಮನದ ಬೆನ್ನಲ್ಲೇ ಕರ್ನಾಟಕದ ಮುಂದಿನ ಸಿಎಂ ಯಾರು ಎಂಬ ಚರ್ಚೆ ಆರಂಭವಾಗಿದೆ. ಈ ಕುರಿತು ಯಡಿಯೂರಪ್ಪನವರು ಯಾವುದೇ ಸುಳಿವು ನೀಡಿಲ್ಲ. ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರ ತಿಳಿಸಿದ್ದಾರೆ.

ನಾಳೆ ನವದೆಹಲಿಯಲ್ಲಿ ಬಿಜೆಪಿಯ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು ಅಲ್ಲಿ ಕರ್ನಾಟಕದ ಹೊಸ ಸಿಎಂ ಯಾರಾಗಬೇಕು ಎಂಬುದರ ಬಗ್ಗೆ ಚರ್ಚೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ವೋಟಿಗೆ ನೋಟು: ಸಂಸದೆ ಮಾಲೋತ್ ಕವಿತಾ ಅವರಿಗೆ 06 ತಿಂಗಳು ಜೈಲು, 10 ಸಾವಿರ ದಂಡ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights