ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದ ಅಭಿಮಾನಿ ಆತ್ಮಹತ್ಯೆ!

ಯಡಿಯೂರಪ್ಪ ಅವರು ಸೋಮವಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಮನನೊಂದ ಅಭಿಮಾನಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ.

ಗ್ರಾಮದ ರಾಜಪ್ಪ (ರವಿ) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ ಆಗಿದ್ದು, ಈ ಕುರಿತು ಯಡಿಯೂರಪ್ಪನವರು ಸಂತಾಪು ಸೂಚಿಸಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಯಾರೂ ಅತಿರೇಕಕ್ಕೆ ಹೋಗಬಾರದೆಂದು ಮನವಿ ಮಾಡಿದ್ದಾರೆ.

“ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ, ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು” ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದು ಅವರು ಮನವಿ ಮಾಡಿದ್ದಾರೆ.

ಜೀವ ಅಮೂಲ್ಯವಾಗಿದೆ ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights