ಸಹೋದರನ ಎದುರು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಉತ್ತರ ಪ್ರದೇಶದಲ್ಲಿ ಅಮಾನುಷ ಘಟನೆ!

ಸಹೋದರನ ಮುಂದೆ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನುಷ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ.

ಸಂತ್ರಸ್ತ ಬಾಲಕಿಯ ಪೋಷಕರು ಶನಿವಾರ ಮತ್ತೊಂದು ಹಳ್ಳಿಗೆ ಕುಟುಂಬ ಕಾರ್ಯಕ್ರಮವೊಂದಕ್ಕೆ ಹೋದಾಗ ಪಕ್ಕದ ಮನೆಯ ಪುರುಷರು ಈ ದುಷ್ಕೃತ್ಯ ಎಸಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದನ್ನು ಗಮಸಿನಿದ ಪುರುಷರು ಮನೆಗೆ ಪ್ರವೇಶಿಸಿ ಮಕ್ಕಳು ಮಲಗಿದ್ದನ್ನು ನೋಡಿದ್ದಾರೆ. ತಕ್ಷಣ ಬಾಗಿಲು ಹಾಕಿಕೊಂಡಿದ್ದಾರೆ. ಆರೋಪಿ ಬಾಲಕಿಗೆ ಗನ್ ತೋರಿಸಿ ತನ್ನ ಮೂವರು ಸ್ನೇಹಿತರೊಂದಿಗೆ ಅತ್ಯಾಚಾರ ಎಸಗಿದ್ದಾನೆಂದು ಎಂದು ಬಾಲಕಿಯ ತಂದೆ ದೂರಿದ್ದಾರೆ.

ಶಬ್ದ ಮಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿ 12 ವರ್ಷದ ಸಹೋದರನನ್ನು ಹಿಡಿದಿಟ್ಟುಕೊಂಡು ಸಹೋದರಿ ಮೇಲೆ ಅತ್ಯಾಚಾರ ಮಾಡಿದ್ದಾರೆ.ಅವರು ಅಪರಾಧದ ವೀಡಿಯೊವನ್ನು ಸಹ ಚಿತ್ರೀಕರಿಸಿದ್ದಾರೆ ಮತ್ತು ಅವರು ದೂರು ನೀಡಿದರೆ ಅದನ್ನು ವೈರಲ್ ಮಾಡುವಂತೆ ಬಾಲಕಿಗೆ ಬೆದರಿಕೆ ಹಾಕಿದ್ದಾರೆ.

ಕಾರ್ಯಕ್ರಮದ ಬಳಿಕ ಮನೆಗೆ ತೆರಳಿದ ಪೋಷಕರಿಗೆ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಬಾಲಕಿಯ ತಂದೆಯ ಪ್ರಕಾರ, ಆರೋಪಿಗಳು ತಮ್ಮನ್ನು ಎದುರಿಸಿ, ವಿಷಯ ಬಾಯಿಬಿಟ್ಟರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಬಾಲಕಿಯ ವೈದ್ಯಕೀಯ ವರದಿಯಲ್ಲಿ ಅತ್ಯಾಚಾರ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ” ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಘಟನೆಯ ನಂತರ ಆರೋಪಿಗಳು ತಪ್ಪಿಸಿಕೊಂಡಿದ್ದರು. ಇವರಲ್ಲಿ ಮೂವರನ್ನು ಮಾತ್ರ ಬಂಧಿಸಲಾಗಿದ್ದು ನಾಲ್ಕನೇ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ, ಮನೆ ಅತಿಕ್ರಮಣ, ಕ್ರಿಮಿನಲ್ ಬೆದರಿಕೆ ಮತ್ತು ಪೊಕ್ಸೊ ಕಾಯ್ದೆಯ ಸೆಕ್ಷನ್ ಅಡಿಯಲ್ಲಿ ಬಂಧಿತ ಮೂವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights