ಸಿಎಎ ನಿಯಮಗಳನ್ನು ರೂಪಿಸಲು ಕೇಂದ್ರ ಸರ್ಕಾರ ಸಮಯ ವಿಸ್ತರಣೆ ಕೇಳಿದೆ: ಕೇಂದ್ರ ಸಚಿವ ನಿತ್ಯಾನಂದ್ ರೈ

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ನಿಯಮಗಳನ್ನು ರೂಪಿಸುಲು ಕೇಂದ್ರವು 2022 ರ ಜನವರಿ 9 ರವರೆಗೆ ವಿಸ್ತರಣೆ ಕೋರಿದೆ ಎಂದು ಗೃಹ ವ್ಯವಹಾರಗಳ ಸಚಿವ ನಿತ್ಯಾನಂದ್ ರೈ ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

ಇದು ಐದನೇ ಬಾರಿಗೆ ಕೇಂದ್ರ ಸರ್ಕಾರ ನಿಯಮಗಳನ್ನು ರೂಪಿಸಲು ವಿಸ್ತರಣೆ ಕೋರಿದೆ. ಸಿಎಎ ಜನವರಿ 10, 2020 ರಿಂದ ಜಾರಿಗೆ ಬಂದಿತು. ಸಂಸತ್ತಿನ ಕೆಲಸದ ಕೈಪಿಡಿಯ ಪ್ರಕಾರ, ಯಾವುದೇ ಶಾಸನವು ರಾಷ್ಟ್ರಪತಿಗಳಿಂದ ಒಪ್ಪಿಗೆ ಪಡೆದ ಆರು ತಿಂಗಳಗಳು ಒಳಗಾಗಿ ನಿಯಮಗಳನ್ನು ರೂಪಿಸಬೇಕು ಅಥವಾ ವಿಸ್ತರಣೆಯ ಅವಕಾಶವನ್ನು ಪಡೆಯುಲು ಸರ್ಕಾರಕ್ಕೆ ಅವಕಾಶ ಇರುತ್ತದೆ.

“ಪೌರತ್ವ (ತಿದ್ದುಪಡಿ) ಕಾಯ್ದೆ, 2019 (ಸಿಎಎ) ಯನ್ನು 12.12.2019 ರಂದು ಅಧಿಸೂಚಿಸಲಾಯಿತು ಮತ್ತು 10.01.2020 ರಿಂದ ಜಾರಿಗೆ ತರಲಾಯಿತು.

ಇದನ್ನೂ ಓದಿ: ಪ್ರತಿಭಟನೆ ಮತ್ತು ಚುನಾವಣೆಗಳ ಭಯದಿಂದ ಸಿಎಎ ಜಾರಿಗೆ ಹಿಂದೆ ಸರಿಯುತ್ತಿದೆಯೇ ಬಿಜೆಪಿ?

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾಗಿ ಭಾರತಕ್ಕೆ ಬಂದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವಲ್ಲಿ ಸಿಎಎ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕೇಂದ್ರ ಹೇಳಿಕೊಂಡಿದೆ. ಆದರೆ, ಇದು ಮುಸ್ಲಿಮರ ವಿಚಾರದಲ್ಲಿ ಪಕ್ಷಪಾತವನ್ನು ಹೊಂದಿದೆ ಎಂದು ಹಲವಾರು ಭಾರತೀಯರು ಈ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾಗಿ ಭಾರತಕ್ಕೆ ಬಂದ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವ ನೀಡುವುದು ಸಿಎಎ ಉದ್ದೇಶವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಇದರಲ್ಲಿ ಮುಸ್ಲೀಮರನ್ನು ಹೊರಗಿಡಲಾಗಿದೆ.

ಧಾರ್ಮಿಕ ಕಿರುಕುಳದಿಂದಾಗಿ 2014 ರ ಡಿಸೆಂಬರ್ 31 ರವರೆಗೆ ಭಾರತಕ್ಕೆ ಬಂದಿದ್ದ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳನ್ನು ಅಕ್ರಮ ವಲಸಿಗರೆಂದು ಪರಿಗಣಿಸದೆ ಭಾರತೀಯ ಪೌರತ್ವ ನೀಡಲಾಗುವುದು ಎಂದು ಕೇಂದ್ರ ಹೇಳಿದೆ.

ಸಿಎಎ ಮಸೂದೆಯನ್ನು ಸಂಸತ್ತು ಅಂಗೀಕರಿಸಿದ ನಂತರ, ದೇಶದ ಸಾವಿರಾರು ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದವು. ಈ ವೇಳೆ ಪೊಲೀಸ್ ಗುಂಡಿನ ದಾಳಿ ಮತ್ತು ಸಂಬಂಧಿತ ಹಿಂಸಾಚಾರದಲ್ಲಿ ಸುಮಾರು 100 ಜನರ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟ ಕೈಬಿಟ್ಟರೆ ಸಚಿವ ಸ್ಥಾನ ನೀಡುವುದಾಗಿ BJP ಆಮಿಷ: ಅಖಿಲ್‌ ಗೊಗೊಯ್ ಆರೋಪ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights