ಜಮ್ಮು ಕಾಶ್ಮೀರದಲ್ಲಿ ಮೇಘಸ್ಪೋಟ : ಐವರು ಮೃತ – 35ಕ್ಕೂ ಹೆಚ್ಚು ಜನ ಕಾಣೆ!

ಜಮ್ಮು ಕಾಶ್ಮೀರದಲ್ಲಿ ಮೇಘಾಸ್ಪೋಟ ಸಂಬಂವಿಸಿದ್ದು, ಭಾರೀ ಮಳೆ ಪ್ರವಾಹದಿಂದಾಗಿ ಐವರು ಮೃತಪಟ್ಟು 35ಕ್ಕೂ ಹೆಚ್ಚು ಜನ ಕಾಣೆಯಾಗಿದ್ದಾರೆ.

ಜಮ್ಮು ಕಾಶ್ಮೀರದ ಕಿಶ್ತ್ವಾರ್ ಗ್ರಾಮದಲ್ಲಿ ಬುಧವಾರ ಮುಂಜಾನೆ ಭಾರಿ ಮಳೆ ಪ್ರವಾಹ ಹಿನ್ನೆಲೆಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 35 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ.

ಪೊಲೀಸ್, ಸೇನೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗ್ರಾಮಕ್ಕೆ ರಸ್ತೆ ಸಂಪರ್ಕವಿಲ್ಲದೆ ಕಾಣೆಯಾದವರ ಶೋಧ ಕಾರ್ಯ ಮುಂದುವರೆದಿದೆ.

In Jammu and Kashmir cloudburst, at least 5 killed, over 25 missing

“ಇಲ್ಲಿಯವರೆಗೆ ರಕ್ಷಣಾ ತಂಡ ಕ್ಲೌಡ್ ಬರ್ಸ್ಟ್ ಪೀಡಿತ ಗ್ರಾಮದಿಂದ ಐದು ಜನರ ಶವಗಳನ್ನು ವಶಪಡಿಸಿಕೊಂಡಿದೆ” ಎಂದು ಕಿಶ್ತ್ವಾರ್ ಜಿಲ್ಲಾ ಅಭಿವೃದ್ಧಿ ಆಯುಕ್ತ ಅಶೋಕ್ ಕುಮಾರ್ ಶರ್ಮಾ ತಿಳಿಸಿದ್ದಾರೆ. “ನಮ್ಮ ಆದ್ಯತೆ ಸಾಧ್ಯವಾದಷ್ಟು ಜೀವಗಳನ್ನು ಉಳಿಸುವುದು” ಎಂದು ಘಟನೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿದ್ದಾರೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights