ಕೈತಪ್ಪಿದ ಸಿಎಂ ಸ್ಥಾನ : ಬೊಮ್ಮಾಯಿ ಸಂಪುಟಕ್ಕೆ ಸೇರದಿರಲು ಶೆಟ್ಟರ್ ನಿರ್ಧಾರ..!
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇ ನೀಡಿದ್ದು ಬಿಜೆಪಿಯಲ್ಲಿ ಸಿಎಂ ಆಕಾಂಕ್ಷಿಗಳಿಗೆ ಭಾರೀ ನಿರಾಸೆಯಾಗಿದೆ. ನಿನ್ನೆ ಬಸವರಾಜ್ ಮೊಬ್ಬಾಯಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ನೀಡಲಾಗಿದ್ದು, ಸಿಎಂ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಜಗದೀಶ್ ಶೆಟ್ಟರ್ ಗೆ ಭಾರೀ ಮುಖಭಂಗವಾಗಿದೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ” ನಾನು ಸಿಎಂ, ಸ್ಪೀಕರ್, ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಸದ್ಯ ಶಾಸಕನಾಗಿ ಕೆಲಸ ಮಾಡುತ್ತೇನೆ. ಬೊಮ್ಮಾಯಿ ಸಂಪುಟ ಸೇರದಿರಲು ನಿರ್ಧರಿಸಿದ್ದೇನೆ. ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ” ಎನ್ನುವ ಮೂಲಕ ತಮ್ಮ ಬೇಸರವನ್ನು ಹೊರ ಹಾಕಿದ್ದಾರೆ.
ಸಿಎಂ ಆಕಾಂಕ್ಷಿಯಾಗಿದ್ದ ಜಗದೀಶ್ ಶೆಟ್ಟರ್ ಈ ಬಾರಿ ಸಿಎಂ ಪಟ್ಟಕ್ಕಾಗಿ ಹೈಕಮಾಂಡ್ ಮಟ್ಟಲ್ಲಿ ಲಾಬಿ ಮಾಡಿದ್ದರು. ಆದರೆ ಸಿಎಂ ಸ್ಥಾನ ಕೈಗೆಟಕಲಿಲ್ಲ. ಇದರಿಂದ ನೇರವಾಗಿ ಬೇಸರ ಹೊರಹಾಕದೆ ಇಂದು ತಾವು ಬೊಮ್ಮಾಯಿ ಸಂಪುಟ ಸೇರದಿರಲು ನಿರ್ಧರಿಸಿರುವ ಬಗ್ಗೆ ಬಹಿರಂಗಗೊಳಿಸಿದ್ದಾರೆ. ಈ ನಿರ್ಧಾರಕ್ಕೆ ತಮ್ಮ ಬೆಂಬಲಿಗರು ಸಂಪೂರ್ಣ ಅನುಮತಿ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಎಂ ಸ್ಥಾನದ ಬಳಿಕ ಸಚಿವರ ಸ್ಥಾನದ ಕಡೆಗೆ ಎಲ್ಲರ ಚಿತ್ತ ನೆಟ್ಟಿದೆ. ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆ ಮಂತ್ರಿಗಿರಿ ಸಿಗಲಿದೆ ಎನ್ನುವ ಕುತೂಹಲ ಮೂಡಿದೆ. ಒಂದು ವೇಳೆ ಬೊಮ್ಮಯಿ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕರೂ ತಾವು ನಿರಾಕರಿಸುವ ಬಗ್ಗೆ ಶೆಟ್ಟರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಣೆ ನೀಡುವ ಮೂಲಕ ಸಿಎಂ ಸ್ಥಾನ ಕೈತಪ್ಪಿದಕ್ಕೆ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.