ರಾಜಸ್ಥಾನದ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಸಿಎಂ ಅಶೋಕ್ ಗೆಹ್ಲೋಟ್

2023ರ ವಿಧಾನಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವ್ಯಕ್ತಪಡಿಸಿದ್ದಾರೆ.

“ಮರೆತುಬಿಡಿ, ಕ್ಷಮಿಸಿ ಮತ್ತು ಒಗ್ಗೂಡಿ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಕೊರತೆಯಿಲ್ಲ. ಕೆಲಸ ಹೀಗೆ ಮುಂದುವರಿಯುತ್ತದೆ…. ನಂಬಿಕೆ ಇಡಿ. ನೀವೆಲ್ಲರೂ ಚುನಾವಣೆಯಲ್ಲಿ ಗೆಲ್ಲುತ್ತೀರಿ ಮತ್ತು ಕಾಂಗ್ರೆಸ್ 2023 ರಲ್ಲಿ ಮತ್ತೆ ಸರ್ಕಾರ ರಚಿಸುತ್ತದೆ “ಎಂದು ಗುರುವಾರ ರಾತ್ರಿ ತಮ್ಮ ನಿವಾಸದಲ್ಲಿ ಪಕ್ಷದ ಶಾಸಕರೊಂದಿಗೆ ನಡೆದ ಅನೌಪಚಾರಿಕ ಸಭೆಯಲ್ಲಿ ಗೆಹ್ಲೋಟ್ ಹೇಳಿದ್ದಾರೆ.

ಕೋವಿಡ್ -19 ಲಸಿಕೆಗಾಗಿ ಪ್ರತಿ ಶಾಸಕರಿಗೆ 3 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಮೊತ್ತವನ್ನು ಮೊದಲೇ ತಡೆಹಿಡಿಯಲಾಗಿತ್ತು. ತಡೆಹಿಡಿಯಲಾದ 3 ಕೋಟಿ ರೂ.ಗಳನ್ನು ಶಾಸಕರ ನಿಧಿಯಿಂದ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.  ಆದರೆ ಅಗತ್ಯವಿರುವ ಒಟ್ಟು 5 ಕೋಟಿ ರೂ.ಗಳಲ್ಲಿ ಶಾಸಕರು 2 ಕೋಟಿ ರೂ.ಗಳನ್ನು ಭರಿಸಬೇಕಾಗುತ್ತದೆ. ಇದರಲ್ಲಿ 2 ಕೋಟಿ ರೂ ಆರೋಗ್ಯ ಕ್ಷೇತ್ರ ಮತ್ತು ಉಳಿದ 3 ಕೋಟಿ ರೂ.ಗಳನ್ನು ಅಭಿವೃದ್ಧಿ ಕಾರ್ಯಗಳಿಗಾಗಿ ಖರ್ಚು ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: 50 ನಗರಸಭೆಗಳಲ್ಲಿ ಕಾಂಗ್ರೆಸ್‌ಗೆ ಅಧಿಕಾರ; 37ಕ್ಕೆ ಕುಸಿದ BJP

ಎರಡೂವರೆ ವರ್ಷಗಳ ಅಧಿಕಾರಾವಧಿಯಲ್ಲಿ ಮಾಡಿದ ಕೆಲಸದ ಬಗ್ಗೆ ಕೈಪಿಡಿಗಳನ್ನು ಮುದ್ರಿಸಲು ಮತ್ತು ಸಾರ್ವಜನಿಕರಿಗೆ ವಿತರಿಸಲು ಗೆಹ್ಲೋಟ್ ಶಾಸಕರಲ್ಲಿ ಮನವಿ ಮಾಡಿದ್ದಾರೆ. ಈ ಕಿರುಪುಸ್ತಕಗಳನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಗೆ (ಪಿಸಿಸಿ) ನೀಡಲಾಗುವುದು.

ರಾಜಸ್ಥಾನದ ಎಐಸಿಸಿ ಉಸ್ತುವಾರಿ ಅಜಯ್ ಮಾಕೆನ್, “ಸರ್ಕಾರ ಮತ್ತು ಶಾಸಕರ ಇಂತಹ ಅದ್ಭುತ ಪ್ರದರ್ಶನವನ್ನು ನಾನು ಬೇರೆಲ್ಲಿಯೂ ನೋಡಿಲ್ಲ” ಎಂದು ಹೇಳಿದ್ದಾರೆ. ಅವರು ನಿರೀಕ್ಷಿತ ಕ್ಯಾಬಿನೆಟ್‌ ಪುನರ್‌ರಚನೆಗೆ ಸಂಬಂಧಿಸಿದಂತೆ ಶಾಸಕರ ಅಭಿಪ್ರಾಯವನ್ನು ಕಲೆ ಹಾಕಿದ್ದಾರೆ.

ಅವರು ಗುರುವಾರ 20 ಜಿಲ್ಲೆಗಳ 49 ಶಾಸಕರೊಂದಿಗೆ ಸಭೆಗಳನ್ನು ನಡೆಸಿದ್ದಾರೆ. ರಾಜ್ಯದ ಎರಡು ದಿನಗಳ ಪ್ರವಾಸದಲ್ಲಿ, ಮಾಕೆನ್ 115 ಶಾಸಕರನ್ನು ಭೇಟಿ ಮಾಡಿದ್ದಾರೆ. ಅವರು ನವದೆಹಲಿಯಲ್ಲಿ ಪಕ್ಷದ ಹೈಕಮಾಂಡ್‌ಗೆ ವರದಿಯನ್ನು ಸಲ್ಲಿಸುತ್ತಾರೆ.

200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಆಡಳಿತ ಪಕ್ಷವು 106 ಶಾಸಕರನ್ನು ಹೊಂದಿದೆ. ಇದಲ್ಲದೆ ಸರ್ಕಾರಕ್ಕೆ 13 ಸ್ವತಂತ್ರ ಶಾಸಕರ ಬೆಂಬಲವಿದೆ. ನಿರೀಕ್ಷಿತ ಕ್ಯಾಬಿನೆಟ್ ಪುನರ್‌ರಚನೆಯಾಗಲಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮಾಕೆನ್ ಮತ್ತು ಕೆ ಸಿ ವೇಣುಗೋಪಾಲ್ ಅವರು ಕಳೆದ ಶನಿವಾರ ಗೆಹ್ಲೋಟ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಕ್ಯಾಬಿನೆಟ್ ವಿಸ್ತರಣೆಯ ನಿರ್ಧಾರವನ್ನು ಪಕ್ಷದ ಹೈಕಮಾಂಡ್‌ಗೆ ಬಿಡಲು ನಾಯಕರು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮಾಕೆನ್ ಅವರು ಶುಕ್ರವಾರ ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಗೆಹ್ಲೋಟ್‌ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮಾತ್ರವಲ್ಲ ರಾಜಸ್ಥಾನದಲ್ಲೂ ಬಿಜೆಪಿ ಅಂತರ್ಯುದ್ಧ; ಹೋರ್ಡಿಂಗ್‌ನಿಂದ ಬಹಿರಂಗ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights