ದೇಶದಲ್ಲಿ ಮತ್ತೆ ಕೊರೊನಾ ಹೆಚ್ಚಳ : 44,230 ಹೊಸ ಕೇಸ್- 555 ಜನ ಬಲಿ!

ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 44,230 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ 44,230 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,15,72,344 ಕ್ಕೆ ತಲುಪಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,05,155 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 42,360 ರೋಗಿಗಳು ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು ಗುಣಮುಖರಾದವರ ಸಂಖ್ಯೆ 3,07,43,972 ಕ್ಕೆ ತಲುಪಿದೆ.

ಕೋವಿಡ್ -19 ಪ್ರಕರಣಗಳನ್ನು ಗರಿಷ್ಠವಾಗಿ ದಾಖಲಿಸಿರುವ ಮೊದಲ ಐದು ರಾಜ್ಯಗಳಲ್ಲಿ ಕೇರಳದಲ್ಲಿ 22,064 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 7,242 ಪ್ರಕರಣಗಳು, ಆಂಧ್ರಪ್ರದೇಶ 2,107 ಪ್ರಕರಣಗಳು, ಕರ್ನಾಟಕದಲ್ಲಿ 2,052 ಪ್ರಕರಣಗಳು ಮತ್ತು ತಮಿಳುನಾಡು 1,859 ಪ್ರಕರಣಗಳನ್ನು ದಾಖಲಿಸಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 555 ಜನರು ಕೋವಿಡ್ -19 ಸೋಂಕಿಗೆ ಬಲಿಯಾಗಿದ್ದು, ರಾಷ್ಟ್ರವ್ಯಾಪಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 4,23,217 ಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ 190 ಗರಿಷ್ಠ ಸಾವುನೋವುಗಳು ಸಂಭವಿಸಿದ್ದು, ಕೇರಳದಲ್ಲಿ 128 ದೈನಂದಿನ ಸಾವುಗಳು ಸಂಭವಿಸಿವೆ.

ಭಾರತ ಇದುವರೆಗೆ 45,60,33,754 ಡೋಸ್‌ಗಳನ್ನು ನೀಡಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 51,83,180 ಡೋಸ್‌ಗಳನ್ನು ನೀಡಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 18,16,277 ಮಾದರಿಗಳನ್ನು ಪರೀಕ್ಷಿಸಲಾಯಿತು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights