ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಎಂ.ಎಸ್.ಧೋನಿಯ ‘ಡ್ಯಾಶಿಂಗ್ ಲುಕ್’!

ಭಾರತ ಕಂಡ ದಿಗ್ಗಜ ಕ್ರಿಕೆಟಿಗ ಎಂಎಸ್ ಧೋನಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯವಾಗಿರುವುದಿಲ್ಲ. ಆದ್ದರಿಂದ ಅವರು ಟ್ವಿಟರ್ ಅಥವಾ ಇನ್‌ಸ್ಟಾಗ್ರಾಮ್‌ನಲ್ಲಿ ಕಾಣಿಸಿಕೊಂಡಾಗಲೆಲ್ಲಾ ವೈರಲ್ ಆಗುತ್ತಾರೆ. ಶುಕ್ರವಾರ ಧೋನಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವಿಭಿನ್ನ ಹೇರ್ ಸ್ಟೈಲ್ ಫೋಟೋವನ್ನು ಹಂಚಿಕೊಂಡಿದ್ದು ಭಾರೀ ವೈರಲ್ ಆಗಿದೆ.

“ಡ್ಯಾಶಿಂಗ್ ಲುಕ್” ಗೆ ಧೋನಿ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ. ಬಾಲಿವುಡ್ ನಟ ಸುನೀಲ್ ಶೆಟ್ಟಿ ಧೋನಿ ಪೋಸ್ಟ್ ಬಗ್ಗೆ ಎಮೋಜಿಯೊಂದಿಗೆ ಪ್ರತಿಕ್ರಿಯಿಸಿದ್ದಾರೆ. ಸೆಲೆಬ್ರಿಟಿ ಕೇಶ ವಿನ್ಯಾಸಕ ಆಲಿಮ್ ಹಕೀಮ್ ಇನ್ಸ್ಟಾಗ್ರಾಮ್ ನಲ್ಲಿ ಫೋಟೋ ಶೇರ್ ಮಾಡಿದ್ದಾರೆ.

MS Dhoni rules the internet by sporting a new dashing look

ಧೋನಿಯ ಹೊಸ ಅವತಾರವನ್ನು ಮೆಚ್ಚಿಕೊಂಡ ಅಭಿಮಾನಿಯೊಬ್ಬರು ಭಾರತದ ಮಾಜಿ ನಾಯಕ 25 ವರ್ಷದ ವ್ಯಕ್ತಿಯಂತೆ ಕಾಣುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

 

Spread the love

Leave a Reply

Your email address will not be published. Required fields are marked *