ಜೂಜುಕೋರರ ಜೊತೆಗೆ ಸಂಭಾಷಣೆ ಆಡಿಯೋ ವೈರಲ್‌; 7 ಪೊಲೀಸ್‌ ಸಿಬ್ಬಂದಿ ಅಮಾನತು!

ಭೋಪಾಲ್‌ನಲ್ಲಿ ಜೂಜುಕೋರರೊಂದಿಗೆ ಪೊಲೀಸ್‌ ಸಿಬ್ಬಂದಿಗಳು ಸಂಭಾಷಣೆ ನಡೆಸಿದ ಆಡಿಯೋ ಕ್ಲಿಪ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಏಳು ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಜೂಜುಕೋರರೊಂದಿಗೆ ಪೊಲೀಸರು ಸಂಭಾಷಣೆ ನಡೆಸಿದ್ದ ಆಡಿಯೋ ವೈರಲ್‌ ಅದ ಬಳಿಕ ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಳಿಕ, ಐಶ್‌ಬಾಗ್ ಪೊಲೀಸ್ ಠಾಣೆಯ ಏಳು ಮಂದಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ಆಡಿಯೋ ಕ್ಲಿಪ್‌ನಲ್ಲಿ, ಪೊಲೀಸರು ಜೂಜುಕೋರರೊಂದಿಗೆ ಹಣಕ್ಕಾಗಿ ಬೇಡಿಕೆ ಇಟ್ಟಿರುವುದನ್ನು ಕೇಳಬಹುದು ಎಂದು ಅವರು ಹೇಳಿದ್ದಾರೆ.

ಈ ಪ್ರಕರಣದ ಪ್ರಾಥಮಿಕ ವಿಚಾರಣೆಯ ನಂತರ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಐಶ್ಬಾಗ್ ಪೊಲೀಸ್ ಠಾಣೆಯ ಉಸ್ತುವಾರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಭೋಪಾಲ್ ದಕ್ಷಿಣ) ಸಾಯಿ ಕೃಷ್ಣ ತೋಟಾ ಅವರು ತಿಳಿಸಿದ್ದಾರೆ.

ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಯಾವುದೇ ಹೆಚ್ಚಿನ ಪೊಲೀಸ್ ಸಿಬ್ಬಂದಿ ಇದರಲ್ಲಿ ಭಾಗಿಯಾಗಿದ್ದಾರೆಯೇ ಎಂದು ತಿಳಿದು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಪೊಲೀಸರನ್ನು ಅಮಾನತುಗೊಳಿಸಿದ ನಂತರ, ಐಶ್‌ಬಾಗ್ ಪೊಲೀಸ್ ಠಾಣೆಗೆ ಇತರ 10 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅವರ ಬದಲಿಯಾಗಿ ನಿಯಮಿತ ಕೆಲಸಕ್ಕೆ ತೊಂದರೆಯಾಗುವುದಿಲ್ಲ ಎಂದು ತೋಟ ಹೇಳಿದ್ದಾರೆ.

“ವಿಚಾರಣೆಯ ನಂತರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯೋಗಿ ನಿಮ್ಮ ಚರ್ಮ ಸುಲಿದು ಗೋಡೆಗೆ ಅಂಟಿಸುತ್ತಾರೆ; ಬಿಜೆಪಿಯಿಂದ ರೈತರಿಗೆ ಬಹಿರಂಗ ಬೆದರಿಕೆ!

Spread the love

Leave a Reply

Your email address will not be published. Required fields are marked *