ರಾಜ್ಯದಲ್ಲಿ ಮತ್ತೆ ಕೊರೊನಾ 3ನೇ ಅಲೆಯ ಅಬ್ಬರ : ಬಿಗಿ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ!

ರಾಜ್ಯ ರಾಜ್ಯಧಾನಿಯಲ್ಲಿ ಮತ್ತೆ ಕೊರೊನಾ ಮೂರನೇ ಅಲೆಯ ಆತಂಕ ಶುರುವಾಗಿದೆ. ನಗರದಲ್ಲಿ ಕಂಟೈನ್ಮೆಂಟ್ ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು ಅಪಾರ್ಟ್ ಮೆಂಟ್ ನಿವಾಸಿಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ.

ನೆರೆ ರಾಜ್ಯ ಕೇರಳದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಜಿಲ್ಲಾಡಳಿತ ಕೊರೊನಾ ಹರಡುವುದನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮಂಜುನಾಥ್, ” ಕರ್ನಾಟಕ-ತಮಿಳುನಾಡು, ಕೇರಳ-ಕರ್ನಾಟಕ ಗಡಿಗಳಲ್ಲಿ ಕೊರೊನಾ ತಪಾಸಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಜನರ ನಿರ್ಲಕ್ಷ್ಯ ಹೆಚ್ಚಾಗಿದ್ದರಿಂದ ನಗರದಲ್ಲಿ ಕೊರೊನಾ ಮೂರನೇ ಅಲೆಯ ಭೀತಿ ಹೆಚ್ಚಾಗಿದೆ.ನಾವು ಗಡಿಯಲ್ಲಿ ತಪಾಸಣೆ ನಡೆಸುತ್ತಿದ್ದೇವೆ. ಕೋವಿಡ್ ನೆಗೆಟಿವ್ ವರದಿ ಹಾಗೂ ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಬೆಂಗಳೂರಿಗೆ ಬರಲು ಅವಕಾಶ ನೀಡಲಾಗುತ್ತಿದೆ” ಎಂದಿದ್ದಾರೆ.

ಇನ್ನೂ ಜನರು ಗುಂಪು ಸೇರದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಚ್ಚು ಹೆಚ್ಚು ಬೆಡ್, ಆಕ್ಸಿಜನ್ ಪ್ಲಾಂಟ್ ಗಳ ನಿರ್ಮಾಣಕ್ಕೆ ಆಧ್ಯತೆ ನೀಡಲಾಗಿದೆ. ಇನ್ನು ವೀಕೆಂಡ್ ಕೃ್ಪ್ಯೂ, ನೇಟ್ ಕರ್ಫ್ಯೂ ಜಾರಿ ಬಗ್ಗೆ ಸರ್ಕಾರ ಚರ್ಚೆ ನಡೆದಿದೆ ಎಂದರು. ಒಟ್ಟಾರೆ ಕೊರೊನಾ 3ನೇ ಅಲೆ ಆತಂಕದ ನಡುವೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ.

300 ಆಸುಪಾಸಿನಲ್ಲಿದ್ದ ಸೋಂಕಿತರ ಸಂಖ್ಯೆ 500 ಕ್ಕೆ ತಲುಪಿದೆ. ಬಿಬಿಎಂಪಿ ಅಧಿಕಾರಿಗೆ ನೈಟ್ ಕರ್ಫ್ಯೂ ಜಾರಿಗೆ ತರಲು ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

 

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights