ಮಹಾರಾಷ್ಟ್ರ, ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ!

ನೆರೆ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಮಹಾರಾಷ್ಟ್ರ, ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

ನೆರೆಯ ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ 72 ಗಂಟೆಗಳ ಒಳಗೆ ಪರೀಕ್ಷಿಸಿದ ನೆಗೆಟಿವ್ ಆರ್‌ಟಿಪಿಸಿಆರ್ ವರದಿಯನ್ನು ನೀಡಲು ಕರ್ನಾಟಕ ಸರ್ಕಾರ ಇಂದು ತನ್ನ ಕೋವಿಡ್ ಮಾರ್ಗಸೂಚಿಗಳಲ್ಲಿ ಸೂಚಿಸಿದೆ.

ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು ಈ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಇತ್ತೀಚಿನ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಗಳನ್ನು ವಿಮಾನಗಳು, ರೈಲುಗಳು, ಬಸ್‌ಗಳು ಮತ್ತು ವೈಯಕ್ತಿಕ ಸಾರಿಗೆಯ ಮೂಲಕ ರಾಜ್ಯಕ್ಕೆ ಪ್ರಯಾಣಿಸುವ ಎಲ್ಲರಿಗೂ ಕಡ್ಡಾಯವಾಗಿ ತೋರಿಸಲು ಸರ್ಕಾರದ ಸುತ್ತೋಲೆಯಲ್ಲಿ ಹೇಳಲಾಗಿದೆ.

ವಿಮಾನಯಾನ ಸಂಸ್ಥೆಗಳು 72 ಗಂಟೆಗಳ ಒಳಗೆ ಪರೀಕ್ಷಿಸಲಾದ RT-PCR ಪ್ರಮಾಣಪತ್ರಗಳನ್ನು ಹೊಂದಿರುವ ಪ್ರಯಾಣಿಕರಿಗೆ ಮಾತ್ರ ಬೋರ್ಡಿಂಗ್ ಪಾಸ್‌ಗಳನ್ನು ನೀಡುತ್ತಿದ್ದು ಇದೇ ರೀತಿಯಲ್ಲಿ ರೈಲ್ವೇ ಅಧಿಕಾರಿಗಳಿಗೆ ಮತ್ತು ಬಸ್‌ಗಳ ಕಂಡಕ್ಟರ್‌ಗಳಿಗೆ 72 ಗಂಟೆಗಳ ಒಳಗೆ ಪರೀಕ್ಷಿಸಲಾದ RT-PCR ಪ್ರಮಾಣಪತ್ರಗಳನ್ನು ಹೊಂದಿರುವ ಪ್ರಯಾಣಿಕರಿಗೆ ಮಾತ್ರ ಟಿಕೇಟ್ ನೀಡಲು ನಿರ್ದೇಶನವನ್ನು ನೀಡಲಾಗಿದೆ.

ಕರ್ನಾಟಕದ ಈ ಎರಡು ನೆರೆಯ ರಾಜ್ಯಗಳು ಈಗ ದೇಶದಲ್ಲಿ ಹೆಚ್ಚಿನ ಹೊಸ ಕೋವಿಡ್ ಪ್ರಕರಣಗಳು ಕಂಡು ಬಂದಿವೆ. ಹೀಗಾಗಿ ಕೇರಳಕ್ಕೆ ಗಡಿಯಾಗಿರುವ ದಕ್ಷಿಣ ಕನ್ನಡ, ಕೊಡಗು ಮತ್ತು ಮೈಸೂರು ಜಿಲ್ಲೆಗಳು ಮತ್ತು ಮಹಾರಾಷ್ಟ್ರದ ಪಕ್ಕದಲ್ಲಿರುವ ಬೆಳಗಾವಿ, ವಿಜಯಪುರ, ಕಲ್ಬುರ್ಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲು ಸರ್ಕಾರ ಆದೇಶಿಸಿದೆ.

 

Spread the love

Leave a Reply

Your email address will not be published. Required fields are marked *