ಪೊಲೀಸರ ಮೇಲೆ ಹಲ್ಲೆ : ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿಚಾರ್ಜ್..!
ಬೆಂಗಳೂರಿನ ಜೆಪಿ ನಗರ ಪೊಲೀಸ್ ಠಾಣೆಯ ಎದುರು ಪ್ರತಿಭಟನಾನಿರತ ಆಫ್ರಿಕನ್ ಪ್ರಜೆಗಳನ್ನು ಚದುರಿಸಲು ಲಾಠಿಚಾರ್ಜ್ ಮಾಡಲಾಗಿದೆ.
ಪೊಲೀಸರ ಮೇಲೆ ಆಫ್ರಿಕನ್ ಪ್ರಜೆಗಳು ಹಲ್ಲೆ ಮಾಡಿದ್ದು, ಜೊತೆಗೆ ಮಹಿಳಾ ಪೊಲೀಸ್ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ ಬೆನ್ನಲ್ಲೆ ಆಫ್ರಿಕನ್ ಪ್ರತಿಭಟನಾಕಾರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ.
ನಿನ್ನೆಯಷ್ಟೇ ಆಫ್ರಿಕನ್ ಪ್ರಜೆ ಜೊಯೆಲ್ ಮಾಲು ಎಂಬಾತನನ್ನು 5 ಗ್ರಾಮ್ ಎಂಡಿಎಂಎ ಡ್ರಗ್ಸ್ ನೊಂದಿಗೆ ವಶಪಡಿಸಿಕೊಳ್ಳಲಾಗಿತ್ತು. ನಂತರ ಆತನಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಆತ ಬದುಕುಳಿಯಲಿಲ್ಲ. ಇದು ಸಹಜ ಸಾವಲ್ಲಾ ಲಾಕ್ ಆಪ್ ಡೆತ್ ಎಂದು ಆರೋಪಿಸಿ ಪೊಲೀಸರ ಮೇಲೆ ಜೊಯೆಲ್ ಮಾಲು ಸ್ನೇಹಿತರು ಹಲ್ಲೆ ಮಾಡಿದ್ದಾರೆ. ಜೆಪಿ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿ, ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಮಾತ್ರವಲ್ಲದೇ ಮಹಿಳಾ ಪೊಲೀಸ್ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಪೊಲೀಸರು ಲಾಠಿಚಾರ್ಜ್ ಮಾಡುವ ಮೂಲಕ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. 8 ರಿಂದ 9 ಆಫ್ರಿಕನ್ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಆದರೆ ಆಫ್ರಿಕನ್ ಪ್ರಜೆಗಳು ಜೊಯೆಲ್ ಮಾಲು ಬಂಧನದ ವೇಳೆ ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟರು. ಹಣ ಕೊಡದೇ ಇದ್ದಾಗ ಹಲ್ಲೆ ಮಾಡಿ ಕೊಂದಿದ್ದಾರೆಂದು ಜೊಯೆಲ್ ಮಾಲು ಸ್ನೇಹಿತರು ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ.
ಮರಣೋತ್ತರ ಪರೀಕ್ಷೆಯಲ್ಲಿ ಆತ ಹೃದಯಾಘಾತದಿಂದ ಮೃತಪಟ್ಟಿದ್ದಾನೆಂದು ವೈದ್ಯರು ಮಾಹಿತಿ ನೀಡಿದ್ದಾರೆ.