ದೇಶದಲ್ಲಿ 42,982 ಹೊಸ ಕೊರೊನಾ ಕೇಸ್ ಪತ್ತೆ : 533 ಜನ ಬಲಿ..!

ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಮೂರನೇ ಅಲೆಯ ಆತಂಕ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ 42,982 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು 533 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,11,076ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಒಟ್ಟು 41,726 ರೋಗಿಗಳು ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ದೇಶಾದ್ಯಂತ ಒಟ್ಟು 3,09,74,748 ಜನ ಗುಣಮುಖರಾಗಿದ್ದಾರೆ.

ಕೇರಳದಲ್ಲಿ ಪ್ರತಿನಿತ್ಯ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 22,414 ಹೊಸ ಪ್ರಕರಣಗಳು ದಾಖಲಾಗಿವೆ. ಇನ್ನೂ ಮಹಾರಾಷ್ಟ್ರದಲ್ಲಿ 6,126 ಪ್ರಕರಣಗಳು, ಆಂಧ್ರ ಪ್ರದೇಶ 2,442 ಪ್ರಕರಣಗಳು, ತಮಿಳುನಾಡು 1,949 ಪ್ರಕರಣಗಳು ಮತ್ತು ಕರ್ನಾಟಕದಲ್ಲಿ 1,769 ಪ್ರಕರಣಗಳು ಹೊದಾಗಿ ದಾಖಲಾಗಿವೆ.

ಜೊತೆಗೆ ಮಹಾರಾಷ್ಟ್ರದಲ್ಲಿ 195 ಜನ ಬಲಿಯಾಗಿದ್ದು , ಕೇರಳದಲ್ಲಿ 108 ಸಾವುಗಳು ಸಂಭವಿಸಿವೆ.

ಕಳೆದ 24 ಗಂಟೆಗಳಲ್ಲಿ ಭಾರತ ಒಟ್ಟು 37,55,115 ಡೋಸ್‌ಗಳನ್ನು ನೀಡಿದ್ದು, ಈವರೆಗೆ ಒಟ್ಟು 48,93,42,295 ಡೋಸ್‌ಗಳನ್ನು ನೀಡಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 16,64,030 ಮಾದರಿಗಳನ್ನು ಪರೀಕ್ಷಿಸಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights