ಶಾಸಕ ಜಮೀರ್ ಮನೆ ಮೇಲೆ ಇಡಿ ದಾಳಿ ಖಡನೀಯ – ಡಿಕೆ ಶಿವಕುಮಾರ್
ಶಾಸಕ ಜಮೀರ್ ಮನೆ ಮೇಲೆ ಇಡಿ ದಾಳಿ ಖಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಐಎಂಎ ವಂಚನೆ ಪ್ರಕರಣ ಸಂಬಂಧ ಬೆಂಗಳೂರಿನ ಶಾಸಕ ಜಮೀರ್ ಅಹಮ್ಮದ್ ಮನೆ ಮೇಲೆ ಇಡಿ ದಾಳಿ ಮಾಡಿದೆ. ಇಂದು ಬೆಳ್ಳಂಬೆಳಿಗ್ಗೆ ಜಮೀರ್ ಅಹಮ್ಮದ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು ಜಮೀರ್ ಬೆಂಬಲಿಗರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ದೂರಿದರು.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ” ಜಮೀರ್ ಕಾನೂನು ಹೋರಾಟ ಮಾಡಲು ತಯಾರಿದ್ದಾರೆ. ಆದರೆ ಬಿಜೆಪಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜಮೀರ್ ಗೆ ಕಿರುಕುಳ ನೀಡುತ್ತಿದೆ. ಬಿಜೆಪಿ ಬಹಳ ಪಾವಿತ್ರ್ಯವಂತರಾ? ಹಣದ ವ್ಯವಹಾರದ ಬಗ್ಗೆ ಬಹಿರಂಗವಾಗಿ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಯಾರೂ ಕೂಡ ಭ್ರಷ್ಟರಿಲ್ವಾ?” ಎಂದು ಪ್ರಶ್ನೆ ಮಾಡಿದ್ದಾರೆ.
‘ಮಾಜಿ ಸಚಿವ ರಮೇಶ್ ಜಾರಕಿಹೊಳಿ 9 ಕೋಟಿ ತಂದು ಯಡಿಯೂರಪ್ಪ ಸರ್ಕಾರ ಕಟ್ಟಿದರು ಎಂದು ಮಾಧ್ಯಮದ ಮುಂದೆ ಬಹಿರಂಗವಾಗಿ ಹೇಳುವಾಗ ಇಡಿ, ಐಡಿ ಅಧಿಕಾರಿಗಳು ಇರಲಿಲ್ವಾ? ಸದನದಲ್ಲಿ ಶ್ರೀನಿವಾಸ್ ಗೌಡ್ರು 30 ಕೋಟಿ ಆರೋಪಮಾಡಿದಾಗ ಇಡಿ ಐಟಿ ಎಲ್ಲಿ ಹೋಗಿತ್ತು? ಬಿಜೆಪಿಗೊಂದು ನ್ಯಾಯ, ಕಾಂಗ್ರೆಸ್ ಗೊಂದು ನ್ಯಾಯನಾ? ಬಿಜೆಪಿಯವರು ಬಹಳ ಪಾವಿತ್ರ್ಯವಂತರಾ?’ ಎಂದು ಗರಂ ಆದರು.