ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಪಂಜಾಬ್ ಸಿಎಂ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ!

2022ರ ವಿಧಾನಸಭೆ ಚುನಾವಣೆಗೂ ಮುನ್ನವೇ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಕಿಶೋರ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ, ಸಾರ್ವಜನಿಕ ಜೀವನದಲ್ಲಿ ಸಕ್ರಿಯತೆಯಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದೇನೆ. ಹೀಗಾಗಿ, ಪಂಜಾಬ್ ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

“ನನ್ನ ಮುಂದಿನ ಕಾರ್ಯಕ್ರಮವನ್ನು ನಾನು ಇನ್ನೂ ನಿರ್ಧರಿಸದ ಕಾರಣ, ಈ ಜವಾಬ್ದಾರಿಯಿಂದ ನನ್ನನ್ನು ಮುಕ್ತಗೊಳಿಸುವಂತೆ ವಿನಂತಿಸಲು ನಾನು ಬರೆಯುತ್ತೇನೆ. ಈ ಸ್ಥಾನಕ್ಕಾಗಿ ನನ್ನನ್ನು ಪರಿಗಣಿಸಿದ್ದಕ್ಕಾಗಿ ನಿಮಗೆ ಧನ್ಯವಾದ ಹೇಳಲು ನಾನು ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಈ ವರ್ಷದ ಮಾರ್ಚ್‌ನಲ್ಲಿ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು 2022 ರ ವಿಧಾನಸಭಾ ಚುನಾವಣೆಗಾಗಿ ಕಿಶೋರ್‌ ಅವರನ್ನು ತಮ್ಮ ಪ್ರಧಾನ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದರು.

ಕಿಶೋರ್‌ ನೇಮಕಗೊಂಡ ಆ ಸಮಯದಲ್ಲಿ, ಪಂಜಾಬ್ ಜನರ ಒಳಿತಿಗಾಗಿ ಕಿಶೋರ್ ಜೊತೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಕ್ಯಾಪ್ಟನ್ ಅಮರೀಂದರ್ ಟ್ವೀಟ್ ಮಾಡಿದ್ದರು.

ಪಂಜಾಬ್ ಸಿಎಂಗೆ ಪ್ರಧಾನ ಸಲಹೆಗಾರರಾಗಿ ನೇಮಕಗೊಂಡ ತಕ್ಷಣ ಎಎನ್ಐ ಜೊತೆ ಮಾತನಾಡಿದ ಕಿಶೋರ್, ಮುಂದಿನ ದಿನಗಳಲ್ಲಿ ಇತರ ಎಲ್ಲಾ ಜವಾಬ್ದಾರಿಗಳೊಂದಿಗೆ ಪಂಜಾಬ್ ನಲ್ಲಿ ಕೆಲಸ ಮಾಡಲು ಆರಂಭಿಸುವುದಾಗಿ ಹೇಳಿದ್ದರು.

ಇದನ್ನೂ ಓದಿ: ಕಳೆದ ಮೂರು ವರ್ಷಗಳಲ್ಲಿ 348 ಜನರು ಪೊಲೀಸ್‌ ಕಸ್ಟಡಿಯಲ್ಲಿ ಸಾವು: 1189 ಜನರ ಮೇಲೆ ದೌರ್ಜನ್ಯ!

ಈ ಹಿಂದೆ, 2021ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಚುನಾವಣಾ ತಂತ್ರಗಾರರಾಗಿ ಕಿಶೋರ್‌ ಕಾರ್ಯನಿರ್ವಹಸಿದ್ದರು. ಅಲ್ಲದೆ, ಬಂಗಾಳದಲ್ಲಿ ಬಿಜೆಪಿ ಎರಡಂಕಿಯನ್ನು ದಾಟುವುದಿಲ್ಲ ಎಂದು ಅವರು ಹೇಳಿದ್ದರು.

ಕಿಶೋರ್‌ ಅವರು ರಾಜಕೀಯ ತಂತ್ರಜ್ಞರಾಗಿ ಅನೇಕ ಪಕ್ಷಗಳೊಂದಿಗೆ ಕೆಲಸ ಮಾಡಿದ್ದಾರೆ ಮತ್ತು ವಿವಿಧ ಚುನಾವಣೆಗಳಲ್ಲಿ ಗೆಲ್ಲಲು ಸಹಾಯ ಮಾಡಿದ್ದಾರೆ.

ಬಿಹಾರದಲ್ಲಿ ಜನತಾದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಅವರು 2015 ರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಸಹಾಯ ಮಾಡಿದ್ದರು. ಇದರ ನಂತರ ನಿತೀಶ್‌ ಕುಮಾರ್ ಕಿಶೋರ್ ಅವರನ್ನು ಜೆಡಿಯು ಉಪಾಧ್ಯಕ್ಷರನ್ನಾಗಿ ನೇಮಿಸಿಕೊಂಡಿದ್ದರು. ಆದಾಗ್ಯೂ, ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ) ವಿಚಾರದಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳಿಂದಾಗಿ ಕಿಶೋರ್ ಅವರನ್ನು ಜನವರಿ 2020 ರಲ್ಲಿ ಜೆಡಿಯುನಿಂದ ಹೊರಹಾಕಲಾಯಿತು.

ಕಳೆದ ವರ್ಷ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧ್ಯಕ್ಷ ಎಂಕೆ ಸ್ಟಾಲಿನ್ ಅವರು ತಮಿಳುನಾಡಿನಲ್ಲಿ 2021ರ ವಿಧಾನಸಭೆ ಚುನಾವಣೆಗೆ ಪ್ರಶಾಂತ್ ಕಿಶೋರ್ ಅವರ ಭಾರತೀಯ ರಾಜಕೀಯ ಕ್ರಿಯಾ ಸಮಿತಿ (ಐ-ಪಿಎಸಿ)ಯು ತಮ್ಮ ಪಕ್ಷಕ್ಕೆ ಸಹಯೋಗ ನೀಡಲಿದೆ ಎಂದು ಘೋಷಿಸಿದ್ದರು.

ಇದನ್ನೂ ಓದಿ: ಬಂಗಾಳದಲ್ಲಿ BJP ಎರಡಂಕಿ ದಾಟಲ್ಲ; ಗೆದ್ದರೆ ಟ್ವಿಟರ್‌ಗೆ ಗುಡ್‌-ಬೈ; ಪುನರುಚ್ಚರಿಸಿದ ಪ್ರಶಾಂತ್ ಕಿಶೋರ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights