ಶಾಮ್ಲಿಯಲ್ಲಿ ಆಕಸ್ಮಿಕ ಗುಂಡಿನ ದಾಳಿ: 80 ವರ್ಷದ ವೃದ್ಧ ಸಾವು

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ 16 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ಗುಂಡು ಹಾಕಿಸಿದ್ದು, 80 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.

ಥಾನಭವನ್ ಪೊಲೀಸ್ ಠಾಣೆ ವ್ಯಾಪ್ತಿಯ ಗಂಗ್ರೋಲ್ ಗ್ರಾಮದ ದೇಶರಾಜ್ ಸಿಂಗ್ ಎಂಬುವವರ ಎದೆಗೆ ಗುಂಡು ಹಾರಿದೆ. ಅವರ ಮೊಮ್ಮಗ ಗುರುವಾರ ರಾತ್ರಿ ಆಕಸ್ಮಿಕವಾಗಿ ಕಂಟ್ರಿಮೇಡ್ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 304 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಬಾಲಾಪರಾಧಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಪೋಸ್ಟ್ ಇನ್ ಚಾರ್ಜ್ ದೇವೇಂದ್ರ ಸಿಂಗ್ ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಗೂ ಮುನ್ನ 2023ರ ಅಂತ್ಯದಲ್ಲಿ ತೆರೆಯಲಿದೆ ರಾಮ ಮಂದಿರ! 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.