ಮೈಸೂರು ವಿವಿ ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಪತ್ನಿಯಿಂದ ದೂರು ದಾಖಲು!

ಮೈಸೂರು  ವಿಶ್ವವಿದ್ಯಾಲಯ ಮಾನಸ ಗಂಗೋತ್ರಿಯಲ್ಲಿರುವ ಕ್ವಾಟ್ರಸ್ ನಲ್ಲಿ ಸಂಶೋಧನಾ ವಿದ್ಯಾರ್ಥಿನಿಯ ಮೇಲೆ ಪ್ರಾಧ್ಯಾಪಕರೊಬ್ಬರು ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಾಮಚಂದ್ರಪ್ಪ ಅವರ ಪತ್ನಿ ತಮ್ಮ ಪತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿದ್ದಾರೆಂದು ಗುರುವಾರ ಮಧ್ಯಾಹ್ನ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೇ ತಪ್ಪಿತಸ್ಥ ಪತಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಸದ್ಯ ಪ್ರಾಧ್ಯಾಪಕ ಡಾ. ರಾಮಚಂದ್ರಪ್ಪ ಪೊಲೀಸರ ಅತಿಥಿಯಾಗಿದ್ದಾರೆ.

ಮಂಡ್ಯದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿಯ ನ್ನು ಪಿಎಚ್ ಡಿ ಗೆ ಸಹಾಯ ಮಾಡುವುದಾಗಿ ಕರೆಯಿಸಿ ಅತ್ಯಾಚರ ಮಾಡಿದ್ದಾನೆಂದು ಸ್ವತ: ಪತ್ನಿಯೇ ಆರೋಪಿಸಿದ್ದಾರೆ.

ಪಿಎಚ್ಡಿಗೆ ಸಹಾಯ ಮಾಡುವುದಾಗಿ ವಿದ್ಯಾರ್ಥಿನಿಯನ್ನು ಗುರುವಾರ ಮನೆಗೆ ಕರೆಸಿಕೊಂಡ  ರಾಮಚಂದ್ರಪ್ಪ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಕರ್ತವ್ಯ ನಿಮಿತ್ತ ಸ್ಟಡಿ ಮೇಟಿರಿಯಲ್ ತರಲು ವಿವಿಗೆ ತೆರಳಿದ್ದ ರಾಮಚಂದ್ರಪ್ಪ ಅವರ ಪತ್ನಿ (ಮೈಸೂರು ವಿವಿ ಪ್ರಾಧ್ಯಾಪಕಿ) ವಾಪಸ್ ಮನೆಗೆ ಬಂದಿದ್ದು, ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ. ಮಾತ್ರವಲ್ಲದೇ ಆಕೆಯಿಂದ ಪೊಲೀಸ್ ಠಾಣೆಯಲ್ಲಿ ದೂರು ಕೊಡಿಸಿದ್ದಾರೆ. ಪೊಲೀಸರು ಪತೊಇಯ ವಿರುದ್ಧ ಕ್ರಮ ಕೈಗೊಳ್ಳಲು ನೆರವಾಗಿದ್ದಾರೆ.

ಈ ಸಂಬಂಧ ರಾಮಚಂದ್ರಪ್ಪ ವಿರುದ್ಧ ಪ್ರಕರಣ ದಾಖಲಿಸಿ ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಸಂತ್ರಸ್ತ ಮಹಿಳೆ ಜಯಲಕ್ಷ್ಈಪುರಂ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ದೂರು ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights