ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಧ್ಯಾನ್‌ ಚಂದ್‌ ಹೆಸರಿಗೆ ಮರುನಾಮಕರಣ: ಮೋದಿ

ಭಾರತದ ಅತ್ಯುನ್ನತ ಕ್ರೀಡಾ ಗೌರವ ಖೇಲ್ ರತ್ನ ಪ್ರಶಸ್ತಿಯನ್ನು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೆಸರಿನಲ್ಲಿ ನೀಡಲಾಗುತ್ತಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರ ರಾಜೀವ್ ಗಾಂಧಿ ಅವರ ಹೆಸರನ್ನು ಬದಲಿಸಿ, ಹಾಕಿ ಮಾಂತ್ರಿಕ ಧ್ಯಾನ್‌ ಚಂದ್‌ ಅವರ ಹೆಸರಿಟ್ಟು ಮರುನಾಮಕರಣ ಮಾಡಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷ ಮತ್ತು ಮಹಿಳಾ ಹಾಕಿ ತಂಡಗಳು ಶ್ಲಾಘನೀಯ ಪ್ರದರ್ಶನ ನೀಡಿವೆ. ಈ ಬಳಿಕ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ಗೌರವಾರ್ಥವಾಗಿ ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಯನ್ನು ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿ ಎಂದು ಶುಕ್ರವಾರ ಮರುನಾಮಕರಣ ಮಾಡಲಾಗಿದೆ.

ಈ ಘೋಷಣೆಯನ್ನು ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮೇಜರ್ ಧ್ಯಾನಚಂದ್ ಅವರ ಹೆಸರಿನಲ್ಲಿ ಖೇಲ್ ರತ್ನ ಪ್ರಶಸ್ತಿಯನ್ನು ನೀಡುವಂತೆ ಭಾರತದಾದ್ಯಂತ ನಾಗರಿಕರಿಂದ ಹಲವು ಮನವಿಗಳನ್ನು ಬಂದಿವೆ. ಅವರ ಭಾವನೆಯನ್ನು ಗೌರವಿಸಿ, ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮೇಜರ್ ಧ್ಯಾನ್ ಚಂದ್ ಭಾರತಕ್ಕೆ ಗೌರವ ಮತ್ತು ಹೆಮ್ಮೆಯನ್ನು ತಂದ ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿ ಒಬ್ಬರು. ನಮ್ಮ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವವನ್ನು ಅವರ ಹೆಸರಿನಲ್ಲಿ ನೀಡಲಾವುದು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪುರುಷರ ಮತ್ತು ಮಹಿಳೆಯರ ಹಾಕಿ ತಂಡದ ಅಸಾಧಾರಣ ಪ್ರದರ್ಶನವು ನಮ್ಮ ಇಡೀ ರಾಷ್ಟ್ರದ ಕಲ್ಪನೆಯನ್ನು ಸೆರೆಹಿಡಿದಿದೆ. ಭಾರತದ ಉದ್ದಗಲಕ್ಕೂ ಹೊಸ ಕ್ರೀಡಾ ಸ್ಪೂರ್ತಿ ಉದಯಿಸುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಪ್ರತಿಷ್ಠಿತ ಪ್ರಶಸ್ತಿಯು 25 ಲಕ್ಷ ರೂ  ಬಹುಮಾನವನ್ನು ಹೊಂದಿದೆ.

ಇದನ್ನೂ ಓದಿ: ನ್ಯಾಯಾಧೀಶರ ಬೆದರಿಕೆ ದೂರುಗಳಿಗೆ ಸಿಬಿಐ, ಏಜೆನ್ಸಿಗಳು “ಸ್ಪಂದಿಸುವುದಿಲ್ಲ”: ಮುಖ್ಯ ನ್ಯಾಯಮೂರ್ತಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights