ದೇಶದಲ್ಲಿ ಮುಂದುವರೆದ ಕೊರೊನಾ ಏರಿಳಿತ : ಹೊಸದಾಗಿ 38,628 ಕೇಸ್ ಪತ್ತೆ!

ದೇಶದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ 38,628 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಜೊತೆಗೆ 617 ಸಾವುಗಳು ವರದಿಯಾಗಿವೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,18,95,38 5ಕ್ಕೆ ತಲುಪಿದ್ದು, ಒಟ್ಟು 4,27,371 ಜನರು ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,12,153ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 40,017 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,10,55,861ಕ್ಕೆ ತಲುಪಿದೆ.

38,628 ಹೊಸ ಕೊರೊನಾ ಪ್ರಕರಣಗಳಲ್ಲಿ ಗರಿಷ್ಠ ಪ್ರಕರಣಗಳನ್ನು ದಾಖಲಿಸಿರುವ ಮೊದಲ ಐದು ರಾಜ್ಯಗಳಲ್ಲಿ ಕೇರಳ 19,948 ಪ್ರಕರಣಗಳು, ಮಹಾರಾಷ್ಟ್ರ 5,539, ಆಂಧ್ರ ಪ್ರದೇಶ 2,209, ತಮಿಳುನಾಡು 1,985  ಮತ್ತು ಕರ್ನಾಟಕ 1,805 ಪ್ರಕರಣಗಳು ದಾಖಲಾಗಿವೆ.

ದೇಶಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಭಾರತ 50 ಕೋಟಿ ಕೋವಿಡ್ -19 ಲಸಿಕೆ ಪ್ರಮಾಣವನ್ನು ನೀಡುವ ಮಹತ್ವದ ಮೈಲಿಗಲ್ಲನ್ನು ದಾಟಿದೆ. 47,65,33,650 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights