ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೊದಲ ಚಿನ್ನ ಗೆದ್ದ ನೀರಜ್ ಚೋಪ್ರಾ; ಅವರ ಸಾಧನೆಯ ಹಾದಿ ಹೀಗಿದೆ!

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಅವರು ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಜಾವೆಲಿನ್‌ ಎಸೆತ ವಿಭಾಗದಲ್ಲಿ 87.58 ಮೀ ದೂರಕ್ಕೆ ಜಾವೆಲಿನ್‌ ಎಸೆದು ಚೋಪ್ರಾ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಭಾರತಕ್ಕಾಗಿ ಚಿನ್ನ ಗೆದ್ದ ಚೋಪ್ರಾ ಅವರ ಸಾಧನೆಯ ಹಾದಿ ಹೀಗಿದೆ:

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ಼್ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ಼್ ಅತ್ಲೆಟಿಕ್ಸ್ ಫ಼ೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ನಂತರ, 2018ರ ಏಷ್ಯನ್ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ನಲ್ಲಿ ಭಾಗವಹಿಸಿದ್ದ ಇವರು ಎರಡೂ ಕ್ರೀಡಾ ಕೂಟದಲ್ಲಿಯೂ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೆ,ಏಷ್ಯನ್ ಗೇಮ್ಸ್‌ನಲ್ಲಿ 88.06 ಮೀ ದೂರ ಜಾವೆಲಿನ್ ಎಸೆದು ರಾಷ್ಟ್ರೀಯ ದಾಖಲೆ ಬರೆದಿದ್ದಾರೆ.

2018ರ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಬಾವುಟ ಹಿಡಿದು ಭಾರತದ ಕ್ರೀಡಾಳುಗಳನ್ನು ಪ್ರತಿನಿಧಿಸುವ ಅವಕಾಶವೂ ಇವರಿಗೇ ದಕ್ಕಿದ್ದು, ಇವರಿಗೆ ಮತ್ತೊಂದು ಹಿರಿಮೆಯನ್ನು ತಂದುಕೊಟ್ಟಿತ್ತು.

2017ರ ಏಷ್ಯನ್ ಅತ್ಲೆಟಿಕ್ ಚಾಂಪಿಯನ್ ಶಿಪ್ಸ್ ನಲ್ಲಿ ನೀರಜ್ 85.23 ಮೀ. ಜಾವೆಲಿನ್ ಎಸೆದು ಸ್ವರ್ಣ ಪದಕ ಪಡೆದಿದ್ದಾರೆ. 2018ರ ಮೇ ತಿಂಗಳಲ್ಲಿ ನಡೆದ ದೋಹ ಡೈಮಂಡ್ ಲೀಗ್ ಪಂದ್ಯದಲ್ಲಿ ಭಾಗವಹಿಸಿ 87.43 ಮೀ. ಜಾವೆಲಿನ್ ಎಸೆಯುವುದರೊಂದಿಗೆ ಹಳೆಯ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ. ಫಿನ್ ಲ್ಯಾಂಡಿನ ಲ್ಯಾಪಿನ್ಲಾಟಿಯಲ್ಲಿ ನಡೆದ “ಸಾವೋ ಗೇಮ್ಸ್‌’ನಲ್ಲಿ ನೀರಜ್‌ ಸ್ವರ್ಣ ಪದಕ ಪಡೆದಿದ್ದಾರೆ.

6 ಚಿನ್ನದ ಪದಕಗಳನ್ನು ಗೆದ್ದಿರುವ ಚೋಪ್ರಾ:

2016ರ ಸೌತ್‌ ಎಷ್ಯನ್‌ ಕ್ರೀಡಾ ಕೂಟ

2016ರ ವಿಶ್ವ ಜೂನಿಯರ್ ಚಾಂಪಿಯನ್‌ ಶಿಪ್‌

2017ರ ಏಷ್ಯನ್‌ ಚಾಂಪಿಯನ್‌ ಶಿಪ್‌

2018ರ ಏಷ್ಯನ್ ಕ್ರೀಡಾಕೂಟ

2018ರ ಕಾಮನ್‌ವೆಲ್ತ್

2021ರ ಟೋಕಿಯೋ ಒಲಿಂಪಿಕ್ಸ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights