ಚಿನ್ನದ ಹುಡುಗ ನೀರಜ್‌ಗೆ ತರಬೇತಿ ನೀಡಿದ್ದ ಕನ್ನಡಿಗ ಕಾಶಿನಾಥ್‌ಗೆ 10 ಲಕ್ಷ ರೂ ಬಹುಮಾನ!

ಟೋಕಿಯೋ ಒಲಂಪಿಕ್ಸ್​ನಲ್ಲಿ ಜಾವೆಲಿನ್‌ ಎಸೆತದ ಚಾಂಪಿಯನ್‌ ನೀರಜ್‌ ಚೋಪ್ರಾ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಅವರ ಸಾಧನೆಗೆ ಮಹಾಪೂರವೇ ಹರಿದು ಬಂದಿದೆ. ಈ ಮಧ್ಯೆ, ಚೋಪ್ರಾಗೆ ತರಬೇತಿ ನೀಡಿದ್ದ ಕರ್ನಾಟಕದ ಕೋಚ್‌ ಶಿರಸಿಯ ಕಾಶಿನಾಥ್‌ ನಾಯ್ಕ್‌ ಅವರಿಗೆ ಕರ್ನಾಟಕ ಸರ್ಕಾರ 10 ಲಕ್ಷ ರೂ ನಗದು ಬಹುಮಾನ ನೀಡಿ, ಗೌರವಿಸಿದೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್‌ ಎಸೆದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನ ಗೆದ್ದ ನೀರಜ್​ ಚೋಪ್ರಾಗೆ ತರಬೇತಿ ನೀಡಿದ್ದು ನಮ್ಮ ಕನ್ನಡಿಗ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಕಾಶಿನಾಥ್ ನಾಯ್ಕ್ ಅವರು 2010 ರ ಕಾಮನ್​ವೇಲ್ತ್​​ ಕ್ರೀಡಾಕೂಟದಲ್ಲಿ ಜಾವೆಲಿನ್‌ ಎಸೆತದಲ್ಲಿ ಕಂಚಿನ ಪದಕ‌ಗಳಿಸಿದ್ದರು.

ಅತ್ಯುತ್ತಮ ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್ ಚೋಪ್ರಾ ಸ್ವರ್ಣ ಪದಕ ಗಳಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ.  ಈ ಸಾಧನೆಗಾಗಿ ಕೋಚ್‌ ಕಾಶಿನಾಥ್ ನಾಯ್ಕ್ ಅವರಿಗೆ 10 ಲಕ್ಷ ರೂ ನಗದು ಬಹುಮಾನ ಘೋಷಿಸಿದ್ದಾರೆ.

ಟೋಕಿಯೋ ಓಲಂಪಿಕ್ ನಲ್ಲಿ ಅಮೋಘ ಸಾಧನೆಗೈದ ಭಾರತದ 7 ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು. ಅಲ್ಲದೆ, ಟೋಕಿಯೋ ಓಲಂಪಿಕ್ಸ್ ನಲ್ಲಿ ಮೂವರು ಕನ್ನಡಿಗರು ಪಾಲ್ಗೊಂಡು ಉತ್ತಮ ಸಾಧನೆ ತೋರಿದ್ದಾರೆ. ಪದಕ ಗಳಿಸಿದ ಕ್ರೀಡಾ ಸಾಧಕರನ್ನು ಗೌರವಿಸಿದಂತೆಯೆ ರಾಜ್ಯದ ಹೆಮ್ಮೆಯ ಕ್ರೀಡಾಪಟುಗಳಾದ ಅಶೋಕ್, ಶ್ರೀಹರಿ ನಟರಾಜ್, ಫೌವಾದ್ ಮಿರ್ಜಾ ಅವರನ್ನೂ ಸನ್ಮಾನಿಸಲಾಗುವುದು‌ ಎಂದು ಕ್ರೀಡಾ ಸಚಿವ ನಾರಾಯಣ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೊದಲ ಚಿನ್ನ ಗೆದ್ದ ನೀರಜ್ ಚೋಪ್ರಾ; ಅವರ ಸಾಧನೆಯ ಹಾದಿ ಹೀಗಿದೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights