ರಾಜ್ಯದಲ್ಲಿ ಮತ್ತೆ ಕೊರೊನಾ ರಣಕೇಕೆ : ಟಫ್ ರೂಲ್ಸ್ ಜಾರಿ ಸಾಧ್ಯತೆ..!

ರಾಜ್ಯದಲ್ಲಿ ಮತ್ತೆ ಕೊರೊನಾ ರಣಕೇಕೆ ಹಾಕುತ್ತಿದ್ದು ಶೀಘ್ರವೇ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ. ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಕಸರತ್ತು ನಡೆಸುತ್ತಿರುವ ಬಿಬಿಎಂಪಿ ಬೆಂಗಳೂರಿನಲ್ಲಿ ಟಫ್ ರೂಲ್ಸ್ ಜಾರಿಗೆ ತರಲು ತಯಾರಿ ನಡೆಸುತ್ತಿದೆ.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ಇಂದು ಬಿಬಿಎಂಪಿ ಮಹತ್ವದ ಸಭೆ ನಡೆಸಲಿದ್ದು, ಶೀಘ್ರವೇ ಕಠಿಣ ನಿಯಮ ಜಾರಿಗೊಳಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದರಿಂದಾಗಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಜೊತೆಗೆ ರಾಜ್ಯಾದ್ಯಾಂತ ರಾತ್ರಿ 9ರಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ನಗರದಲ್ಲಿ ನಿತ್ಯ ನಾಲ್ಕುನೂರು ಆಸು ಪಾಸು ಕೊರೊನಾ ಕೇಸ್ ಗಳು ದಾಖಲಾಗುತ್ತಿವೆ. ಒಂದು ವೇಳೆ ಕೊರೊನಾ ಸೋಂಕಿತರ ಸಂಖ್ಯೆ ನಿತ್ಯ 5 ನೂರು ಗಡಿ ದಾಟಿದರೆ ವೀಕೆಂಡ್ ಕರ್ಫ್ಯೂ ಫಿಕ್ಸ್ ಎನ್ನಲಾಗುತ್ತಿದೆ.

ಇನ್ನೂ ಆಗಸ್ಟನಿಂದ ಕಾಲೇಜುಗಳನ್ನು ತೆರೆಯುವ ಸಾಧ್ಯತೆ ತೀವ್ರ ಕಡಿಮೆ ಇದ್ದು ಕೊರೊನಾ ಸೋಂಕು ಹೆಚ್ಚಾದರೆ ಆನ್ ಕ್ಲಾಸ್ ಮುಂದುವರೆಯುವ ಸಾಧ್ಯತೆ ಇದೆ. ಬಿಬಿಎಂಪಿ ರಾಜ್ಯ ಸರ್ಕಾರಕ್ಕೆ ಬಾರ್, ಜಿಮ್ , ಥಿಯೇಟರ್, ಕ್ಲಬ್, ಥಿಯೇಟರ್ ಬಂದ್ ಮಾಡುವಂತೆ ಮನವಿ ಮಾಡಿದೆ. ಒಂದು ವೇಳೆ ಬಂದ್ ಮಾಡದೇ ಹೋದರೂ 50-50 ರೂಲ್ಸ್ ಜಾರಿಗೆ ತರಬಹುದು ಎನ್ನಲಾಗುತ್ತಿದೆ. ಈಗಾಗಲೇ ಮದುವೆಗೆ 50 ಜನರಿಗಿಂತ ಹೆಚ್ಚು ಜನರು ಸೇರದಂತೆ ಸೂಚಿಸಲಾಗಿದ್ದು, ಇದರಂತೆ ಥಿಯೇಟರ್ ನಲ್ಲಿ 50-50 ರೂಲ್ಸ್ ಜಾರಿ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ.

ಇದರ ಮಧ್ಯೆ ಕರ್ನಾಟಕದಲ್ಲಿ ರೂಪಾಂತರಿ ವೈರಸ್ ನಿಂದ 20 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಬಹುದು ಎಂದು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

ಇದರಿಂದಾಗಿ ಬಿಬಿಎಂಪಿ ಇಂದು ಸಭೆ ನಡೆಸಲಿದ್ದು, ಇಂದು ಕೊರೊನಾ ಕಠಿಣ ನಿಯಮಗಳ ಬಗ್ಗೆ ನಿರ್ಧರಿಸಲಾಗುತ್ತದೆ.

 

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights