ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : ಶೇ.99 ರಷ್ಟು ವಿದ್ಯಾರ್ಥಿಗಳು ಪಾಸ್!

ಕೊರೊನಾ ರಣಕೇಕೆಯ ನಡುವೆ ಈ ಬಾರಿ ಎಲ್ಲಾ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣರಾಗಿದ್ದಾರೆ. ಜುಲೈ 19 ಮತ್ತು 22ರಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಆಬ್ಜೆಕ್ಟಿವ್ ಟೈಪ್ ಪರೀಕ್ಷೆಗಳನ್ನುನಡೆಸಿತ್ತು. ಯಶಸ್ವಿಯಾಗಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಓರ್ವ ವಿದ್ಯಾರ್ಥಿನಿ ಗೈರಾಗಿದ್ದರಿಂದ ಅನುತ್ತೀರ್ಣರಾಗಿದ್ದಾರೆ.

ಇಂದು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ 99%ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 4,70,160 ವಿರ್ದಾರ್ಥಿಗಳು ಉತ್ತೀರ್ಣರಾದರೆ, 4,01,280 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ.

ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದರೂ ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮಾಹಿತಿ ನೀಡಿದ್ದಾರೆ.

1,28,931 ವಿದ್ಯಾರ್ಥಿಗಳು A+ ಗ್ರೇಡ್​, 2,50,317 ವಿದ್ಯಾರ್ಥಿಗಳು A ಗ್ರೇಡ್, 2,87,694 ವಿದ್ಯಾರ್ಥಿಗಳು B ಗ್ರೇಡ್​, 1,13,610 ವಿದ್ಯಾರ್ಥಿಗಳು C ಗ್ರೇಡ್​ ಪಡೆದುಕೊಂಡಿದ್ದಾರೆ. ಸಿ ಗ್ರೇಡ್ ಪಡೆದಿರುವ ಶೇ 9ರಷ್ಟು ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್​ ಮಾರ್ಕ್ಸ್​) ನೀಡಿ ಉತ್ತೀರ್ಣ ಮಾಡಲಾಗಿದೆ. ಹೆಚ್ಚಿನ ಮಾಹಿತಿಯನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights