ಕರ್ನಾಟಕದ 865 ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಎಂಇಎಸ್ ಕಾರ್ಯಕರ್ತರಿಂದ ಮೋದಿಗೆ ಪತ್ರ!
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಯಂತೆ ರಾಜ್ಯದ 865 ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಎಂಇಎಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಮರಾಠಿಗರ ಮೇಳೆ ದೌರ್ಜನ್ಯವಾಗುತ್ತಿದೆ ಎಂದು ಆರೋಪಿಸಿ ಬೆಳಗಾವಿ, ನಿಪ್ಪಾಣಿ, ಖಾನಾಪುರ ಮತ್ತು ಬೀದರ್ ಜಿಲ್ಲೆಯ ಗಡಿ ಭಾಗದ 865 ಮಹಾರಾಷ್ಟ್ರಕ್ಕೆ ಸೇರಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು, ಇದೀಗ ಪ್ರಧಾನಿಗೆ ಪತ್ರ ಅಭಿಯಾನ ಪ್ರಾರಂಭಿಸಿದ್ದಾರೆ.
ಈ ಹಿಂದೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕೂಡ ಮರಾಠಿ ಭಾಷಿಕರು ಬಹುಸಂಖ್ಯಾತರಾಗಿರುವ ಕರ್ನಾಟಕದ ಪ್ರದೇಶಗಳನ್ನು ಮರಳಿ ರಾಜ್ಯಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಘೋಷಿಸಿದ್ದರು. ‘ಮರಾಠಾ ಹುತಾತ್ಮರ ದಿನ’ವಾದ ಭಾನುವಾರ (ಜ.17) ಈ ಸಂಬಂಧ ಟ್ವೀಟ್ ಮಾಡಿದ್ದ ಅವರು, ”ಭಾಷಾವಾರು ಪ್ರಾಂತ್ಯ ವಿಂಗಡಣೆ ವೇಳೆ ಕರ್ನಾಟಕಕ್ಕೆ ಸೇರ್ಪಡೆಯಾಗಿರುವ ಪ್ರದೇಶಗಳನ್ನು ಮರಳಿ ಪಡೆಯುವುದೇ ಮರಾಠಾ ಹುತಾತ್ಮರಿಗೆ ನಾವು ಸಲ್ಲಿಸುವ ನಿಜವಾದ ಗೌರವ,” ಎಂದು ಹೇಳಿದ್ದರು.
महाराष्ट्रात समाविष्ट होण्यासाठी प्राणपणाला लावणाऱ्या सीमा लढ्यातील हुतात्म्यांना आजच्या हुतात्मा दिनी विनम्र अभिवादन!
सीमा प्रश्नात सर्वस्वाची होळी करणारे हुतात्मे आणि त्यांच्या त्याग तसेच समर्पणात होरपळूनही आजही या लढ्यात धीराने आणि नेटाने सहभागी कुटुंबीयांना मानाचा मुजरा!
— CMO Maharashtra (@CMOMaharashtra) January 17, 2021
ಇದಕ್ಕೆ ಪುಷ್ಠಿ ನೀಡುವಂತೆ ಎಂಇಎಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಕರ್ನಾಟಕದ 865 ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಆಗ್ರಹಿಸಿದ್ದಾರೆ.


