ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ!

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧನಕ್ಕೀಡಾಗಿರುವ ಚಿತ್ರದ ನಿರ್ದೇಶಕ ಶಂಕರ್​ ರಾಜ್, ಫೈಟ್ ಮಾಸ್ಟರ್ ವಿನೋದ್ ಕುಮಾರ್ ಮತ್ತು ಕ್ರೇನ್ ಆಪರೇಟರ್ ಮಹಾದೇವ್ ಎಂಬುವವರನ್ನು 14 ದಿನಗಳ ನ್ಯಾಯಾಂಗ ವಶಕ್ಕೆ ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶಿಸಿದೆ.

ನಟ ಅಜಯ್ ರಾವ್ ಹಾಗೂ ರಚಿತಾ ರಾಮ್ ನಟಿಯಾಗಿ ಅಭಿನಯಿಸುತ್ತಿರುವ ‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಎಂಬಾತ ವಿದ್ಯುತ್​ ತಗುಲಿ ಮೃತಪಟ್ಟಿದ್ದಾನೆ. ನಿನ್ನೆ ನಡೆದ ಘಟನೆಗೆ ಸಂಬಂಧಿಸಿದಂತೆ ಐವರ ವಿರುದ್ಧ ಬಿಡದಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

ನಿರ್ದೇಶಕ ಶಂಕರ್​ ರಾಜ್​ ಎ1, ನಿರ್ಮಾಪಕ ಗುರು ದೇಶಪಾಂಡೆ ಎ2, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್ ಎ3, ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಎ4 ಹಾಗೂ ಕ್ರೇನ್ ಆಪರೇಟರ್ ಮಹದೇವ್ ಎ5 ಎಂದು ಐವರ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ. ಇವರ ಪೈಕಿ  ರ್ದೇಶಕ ಶಂಕರ್​ ರಾಜ್, ಫೈಟ್ ಮಾಸ್ಟರ್ ವಿನೋದ್ ಕುಮಾರ್ ಮತ್ತು ಕ್ರೇನ್ ಆಪರೇಟರ್ ಮಹಾದೇವ್ ಎಂಬುವವರನ್ನು 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಕೋರ್ಟ್ ಆದೇಶಿಸಿದೆ.

ಘಟನೆಯ ಬಳಿ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ ಮತ್ತು ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಪರಾರಿ ಆಗಿದ್ದಾರೆ. ಇವರ ಹುಡುಕಾಟ ಪೊಲೀಸರು ನಡೆಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights