ಕರಾಟೆ ಬೆಲ್ಟ್ ನಿಂದ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ ಮಗಳು..!

ವ್ಯಾಸಂಗದ ವಿಚಾರವಾಗಿ ಮಗಳೊಬ್ಬಳು ಕರಾಟೆ ಬೆಲ್ಟ್ ನಿಂದ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ ದಾರುಣ ಘಟನೆ ಮುಂಬಯಿಯಲ್ಲಿ ನಡೆದಿದೆ.

ಜುಲೈ 30 ರಂದು ನ್ಯೂ ಮುಂಬೈನ ಐರೋಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 15 ವರ್ಷದ ಬಾಲಕಿ ಹಾಗೂ 40 ವರ್ಷದ ತಾಯಿ ನಡುವೆ ವ್ಯಾಸಂಗದ ವಿಚಾರವಾಗಿ ಮನಸ್ತಾಪಗಳಾಗುತ್ತಿದ್ದವು. ತಾಯಿ ತನ್ನ 15 ವರ್ಷದ ಮಗಳು ವೈದ್ಯಕೀಯ ಕೋರ್ಸ್ ಮಾಡಬೇಕೆಂದು ಬಯಸಿದ್ದರಿಂದ ಹುಡುಗಿ ಮತ್ತು ತಾಯಿ ಆಗಾಗ್ಗೆ ಜಗಳವಾಡುತ್ತಿದ್ದರು. ಪ್ರತೀ ಬಾರಿ ಜಗಳವಾದಾಗ ಮಗಳು ವೈದ್ಯಕೀಯ ಕೋರ್ಸ್ ಮಾಡಲು ನಿರಾಕರಿಸುತ್ತಿದ್ದಳು. ಜಗಳ ತಾರಕಕ್ಕೇರಿದ ಬೆನ್ನಲ್ಲೇ ಮಗಳು ತನ್ನ ಕರಾಟೆ ಬೆಲ್ಟ್ ನಿಂದ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಆಕಸ್ಮಿಕವಾದ ಈ ಘಟನೆಯನ್ನು ಮಗಳು ಮುಚ್ಚಿ ಹಾಕಲು ಪ್ರಯತ್ನಿಸಿದ್ದಾಳೆ.

ಹೀಗಾಗಿ ಬಾಲಕಿ ತನ್ನ ತಾಯಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಮೃತದೇಹವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಯಲ್ಲಿ ಮಹಿಳೆ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಚಾರಣೆಯ ಸಮಯದಲ್ಲಿ, ಹದಿಹರೆಯದ ಹುಡುಗಿ ತನ್ನ ತಾಯಿಯೊಂದಿಗೆ ಜಗಳವಾಡಿದ ನಂತರ ತನ್ನ ತಾಯಿಯನ್ನು ಕರಾಟೆ ಬೆಲ್ಟ್ ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ.

ಬಾಲಕಿಯನ್ನು ಸೋಮವಾರ ಬಂಧಿಸಲಾಗಿದ್ದು ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights