‘ಜನರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ’: ಬಿಜೆಪಿ ವಿರುದ್ಧ ಡಿಕೆಶಿ ಗರಂ!

‘ಕೋವಿಡ್ 2ನೇ ಅಲೆಯಲ್ಲಿ ಆಗಿರುವ ನಷ್ಟಕ್ಕೆ ರೈತರಿಗೆ ಸರ್ಕಾರದಿಂದ ಈವರೆಗೂ ಪರಿಹಾರ ಸಿಕ್ಕಿಲ್ಲ. ಬೆಳೆಗೆ ಬೆಲೆ ಇಲ್ಲದೆ ರೈತರು ಪರದಾಡುತ್ತಿದ್ದಾರೆ. ಸರ್ಕಾರ ಇದ್ಯಾವುದರ ಬಗ್ಗೆಯೂ ಚಿಂತಿಸದೇ ಜನರ ಜೀವನದ ಜತೆ ಚೆಲ್ಲಾಟವಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ‘ಹೊಸ ಸರ್ಕಾರ ಬಂದಿದೆ, ಜನರ ರಕ್ಷಣೆ ಮಾಡುತ್ತದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ. ಹಾರ-ತುರಾಯಿ ಹಾಕಿಸಿಕೊಳ್ಳುವವರಿಗೆ ನಾನು ಬೇಡ ಎನ್ನುವುದಿಲ್ಲ. ಕೋವಿಡ್ ಸೋಂಕು ನಿಯಂತ್ರಿಸಬೇಕು. ಎಲ್ಲರೂ ತಮ್ಮ ಕ್ಷೇತ್ರಗಳಿಗೆ ಹೋಗಿ ಎಂದು ಸಿಎಂ ಸೂಚಿಸಿದ್ದಾರೆ. ಈ ವಿಚಾರವಾಗಿ ನಾನು ಇಲ್ಲಿ ಮಾತನಾಡುವುದಿಲ್ಲ. ಎಲ್ಲಿ ಹೋದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ, ಅವರು ಬೆಳೆದ ಟಮೋಟೋ, ತರಕಾರಿಗಳಿಗೆ ಬೆಲೆ ಸಿಗದೇ ಬಿಸಾಕುತ್ತಿದ್ದಾರೆ. ನೂತನ ಮುಖ್ಯಮಂತ್ರಿಗಳು ಬಂದಿದ್ದಾರೆ, ಅವರಾದರೂ ರೈತರು, ಸಾಂಪ್ರದಾಯಿಕ ವೃತ್ತಿ ಅವಲಂಬಿಸಿರುವವರನ್ನು ಉಳಿಸುತ್ತಾರಾ ನೋಡಬೇಕು’ ಎಂದು ಬಿಜೆಪಿ ವಿರುದ್ಧ ಗರಂ ಆದರು.

‘ಜಗದೀಶ್ ಶೆಟ್ಟರ್ ಅವರು ಮಂತ್ರಿಯಾಗಿದ್ದ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚಿಂತನೆ ಮಾಡಬೇಕಿದೆ, ಅಧಿವೇಶನ ಕರೆಯುತ್ತೇವೆ ಎಂದಿದ್ದರು. ಈಗ ಉತ್ತರ ಕರ್ನಾಟಕ ಭಾಗದ ಮುಖ್ಯಮಂತ್ರಿಗಳೇ ಇದ್ದಾರೆ. ಯಾವಾಗ ಕರೆಯುತ್ತಾರೋ ನೋಡೋಣ. ತರಾತುರಿಯಲ್ಲಿ ನಾನು ಮಾತನಾಡುವುದಿಲ್ಲ’ ಎಂದಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights